ಲಕ್ನೋ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಸ್ಪರ್ಧಿಸುವುದಿಲ್ಲ ಎಂದು ಬಿಎಸ್‍ಪಿ ಸಂಸದ ಸತೀಶ್ ಚಂದ್ರ ಮಿಶ್ರಾ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಮತ್ತು ಮಾಯಾವತಿ ಇಬ್ಬರು ಸ್ಪರ್ಧಿಸುವುದಿಲ್ಲ. ಮಾಯವತಿ ಈ ಹಿಂದೆಯೂ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ ಎಂದು ಹೇಳಿದರು.
Advertisement
Advertisement
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಾಗೂ ಸಮಾಜವಾದಿ ಪಕ್ಷಗಳು ಸೋಲನ್ನು ಅನುಭವಿಸಲಿದೆ. ಉತ್ತರ ಪ್ರದೇಶದಲ್ಲಿ ಬಿಎಸ್‍ಪಿ ಪಕ್ಷವೇ ಅಧಿಕಾರದ ಗದ್ದುಗೆಯನ್ನು ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
ಇತ್ತೀಚೆಗಷ್ಟೇ ಚುನಾವಣಾ ಆಯೋಗ ಪಂಚರಾಜ್ಯಗಳ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಸ್ಲಂ ಬೋರ್ಡ್‍ನಿಂದ ಕೈಗೆತ್ತಿಕೊಂಡಿರುವ 50 ಮನೆಗಳನ್ನು ಜ.30 ರೊಳಗೆ ಪೂರ್ಣಗೊಳಿಸಬೇಕು: ಗೋಪಾಲಯ್ಯ
Advertisement
2017ರಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 403 ಸ್ಥಾನಗಳಲ್ಲಿ 312 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಹಿಡಿದಿತ್ತು. ಬಹುಜನ ಸಮಾಜವಾದಿ ಪಕ್ಷ (ಬಿಎಸ್‍ಪಿ) 19 ಸ್ಥಾನವನ್ನು ಗೆದ್ದಿತ್ತು. ಎಸ್‍ಪಿ 47 ಸ್ಥಾನಗಳನ್ನು ಹಾಗೂ ಕಾಂಗ್ರೆಸ್ ಏಳು ಸ್ಥಾನಗಳನ್ನು ಪಡೆದಿತ್ತು. ಇದನ್ನೂ ಓದಿ: ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ