ಹೈದರಾಬಾದ್: ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಜನಸೇನಾ ಪಕ್ಷ ಬಿಎಸ್‍ಪಿ ಮೈತ್ರಿಯೊಂದಿಗೆ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ.
ಚುನಾವಣಾ ಪೂರ್ವ ಮೈತ್ರಿ ಕುರಿತು ಮಾಹಿತಿ ನೀಡಿ ಮಾತನಾಡಿದ ಅವರು, ನಾವು ಮಾಯಾವತಿ ಅವರ ಬಿಎಸ್‍ಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ. ಅವರು ದೇಶದ ಪ್ರಧಾನಿ ಆಗುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಮಾಯಾವತಿ ಅವರು ಕೂಡ ಶೀಘ್ರದಲ್ಲೇ ಸೀಟು ಹಂಚಿಕೆ ನಿರ್ಣಯ ತಿಳಿಸಲಾಗುವುದು. ಆಂಧ್ರಪ್ರದೇಶದಲ್ಲಿ ಪವನ್ ಕಲ್ಯಾಣ್ ಮುಖ್ಯಮಂತ್ರಿ ಆಗಬೇಕಿದೆ ಎಂದು ಹೇಳಿದ್ದಾರೆ.
Advertisement
Jana Sena Chief Pawan Kalyan after alliance with BSP: We would like to see Behen ji Mayawati ji as the Prime Minister of our country, this is our wish and our ardent desire. pic.twitter.com/HtF17cfi4T
— ANI (@ANI) March 15, 2019
Advertisement
2014 ರಲ್ಲಿ ಪಕ್ಷ ಹೆಸರು ಅಧಿಕೃತ ಘೋಷಣೆ ಮಾಡಿದ ಬಳಿಕ ಮೊದಲ ಬಾರಿಗೆ ಜನಸೇನಾ ಪಕ್ಷ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದೆ. ಆಂಧ್ರಪ್ರದೇಶದ 32 ವಿಧಾನಸಭಾ ಹಾಗೂ 6 ಲೋಕಸಭಾ ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಮೂಲಕ ಆಂಧ್ರಪ್ರದೇಶ ಚುನಾವಣೆಯಲ್ಲಿ ಮೊದಲ ಅಭ್ಯರ್ಥಿಗಳನ್ನು ಘೋಷಿಸಿದ ಮೊದಲ ಪಕ್ಷ ಎನಿಸಿಕೊಂಡಿದ್ದರು.
Advertisement
ಮೈತ್ರಿ ಭಾಗವಾಗಿ ಪವನ್ ಕಲ್ಯಾಣ್ ಹಾಗೂ ಮಾಯಾವತಿ ಅವರು ಜೊತೆಯಾಗಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆಯೂ ಜೆಡಿಎಸ್ ಪಕ್ಷದೊಂದಿಗೆ ಬಿಎಸ್‍ಪಿ ಮೈತ್ರಿ ಮಾಡಿಕೊಂಡಿತ್ತು.
Advertisement
BSP Chief Mayawati: Jana Sena and BSP will fight together in Andhra Pradesh and Telangana; seats have almost been finalized. pic.twitter.com/t7UbHOw8pn
— ANI (@ANI) March 15, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv