ಲಕ್ನೋ: ಮುಂಬರುವ ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ನಡೆಸದೇ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್‍ಪಿ ಏಕಾಂಗಿಯಾಗಿ ಸ್ಪರ್ಧಿಸುತ್ತದೆ. ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆ ಮಾತ್ರ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.
Advertisement
Congress, like the BJP, is conspiring to finish off our (BSP) party: BSP Chief Mayawati to ANI pic.twitter.com/gCPoSSaaG1
— ANI UP/Uttarakhand (@ANINewsUP) October 3, 2018
Advertisement
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದ ಅತ್ಯಂತ ಹಳೆಯ ಪಕ್ಷವಾಗಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಬದಲು, ಕಾಂಗ್ರೆಸ್ ಬಿಎಸ್‍ಪಿಯನ್ನೇ ಮುಗಿಸುವ ಯತ್ನ ಮಾಡುತ್ತಿದೆ. ಹೀಗಾಗಿ ನಾವು ಈ ಮೊದಲು ಕರ್ನಾಟಕ ಮತ್ತು ಛತ್ತೀಸ್‍ಗಢ್‍ದಲ್ಲಿನ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡ ರೀತಿಯಲ್ಲೇ, ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
Advertisement
ಮಾಯಾವತಿಯವರ ಹೇಳಿಕೆಯಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿ ಕೂಟಕ್ಕೆ ಭಾರೀ ಹಿನ್ನಡೆಯಾಗಲಿದೆ. ಕಾಂಗ್ರೆಸ್ ಬಿಎಸ್‍ಪಿ ನಾಯಕಿಯ ವಾದವನ್ನು ಹೇಗೆ ಗಣನೆಗೆ ತೆಗೆದುಕೊಂಡು ಚುನಾವಣೆ ಎದುರಿಸುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.
Advertisement
Bahujan Samaj Party Chief Mayawati announced to go solo in the upcoming Rajasthan and Madhya Pradesh state polls this year. However, maintained suspense over an alliance for the 2019 Lok Sabha polls, with Congress
Read @ANI Story | https://t.co/5VkurAqzeY pic.twitter.com/LrcOw7sknJ
— ANI Digital (@ani_digital) October 3, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv