ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಶಿಫಾರಸ್ಸು ಪತ್ರವನ್ನು ರಾಜ್ಯ ಸರ್ಕಾರ, ಕೇಂದ್ರಕ್ಕೆ ಕಳುಹಿಸಿದೆ. ಆದ್ರೆ ಆ ವಿಚಾರದಲ್ಲಿ ಹಾಲಲ್ಲಿ ಉಪ್ಪು ಹಾಕುವ ಕೆಲಸವನ್ನು ಮಾಡಬೇಡಿ ಎಂದು ಪರೋಕ್ಷವಾಗಿ ಯಡಿಯೂರಪ್ಪ, ಅನಂತಕುಮಾರ್ ಹಾಗೂ ಸದಾನಂದಗೌಡ ಅವ್ರಿಗೆ ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಟಾಂಗ್ ನೀಡಿದ್ದಾರೆ.
ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಪುರಾವೆಗಳನ್ನು, ಸಾಕ್ಷ್ಯಗಳನ್ನು ನೀಡಿ ಕೇಂದ್ರಕ್ಕೆ ಕಳುಹಿಸಿದ್ದೇವೆ. ಕೇಂದ್ರ ಸರ್ಕಾರ ಕೂಡ ನಮ್ಮ ಮನವಿಗೆ ಸ್ಪಂದಿಸುತ್ತದೆಯೆಂಬ ಅಚಲ ವಿಶ್ವಾಸವಿದೆ. ಆದ್ರೆ ಅದ್ರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಅನಂತಕುಮಾರ್, ಸದಾನಂದಗೌಡ ಅವರು ನಮಗೆ ಸಹಾಯ ಮಾಡಬೇಕೆಂದು ಅವರು ಮನವಿ ಮಾಡಿದ್ರು. ಇದನ್ನೂ ಓದಿ: ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ
Advertisement
ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಗೂ ಚುನಾವಣೆಗೂ ಸಂಬಂಧವಿಲ್ಲ. ಚುನಾವಣೆಗಾಗಿ ನಾವು ಮಾಡೋದಿದ್ರೆ ನಾವು ಯಾವಾಗಲೋ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುತ್ತಿದ್ದೆವು. ರಾಜ್ಯದಲ್ಲಿ ಅದಕ್ಕೆ ಮಾನ್ಯತೆ ಕೊಟ್ಟು ಬಳಿಕ ನಾವು ಕೇಂದ್ರಕ್ಕೆ ಶಿಫಾರಸ್ಸು ಕಳಿಸಿದ್ದೇವೆ. ಆರಂಭದಲ್ಲಿ ಬಹಳ ಜನ ಎಂಬಿ ಪಾಟೀಲರು ಚುನಾವಣೆಗಾಗಿ ಪ್ರತ್ಯೇಕತೆ ಕೂಗು ಎತ್ತಿದ್ದಾರೆಂದು ಮಾತನಾಡಿದ್ರು. ಆದ್ರೆ ಅದಕ್ಕೆ ನಾವು ಬದ್ಧತೆಯಿಂದ ರಾಜ್ಯದಲ್ಲಿ ಮಾನ್ಯತೆ ನೀಡಿ ಕೇಂದ್ರಕ್ಕೆ ಶಿಫಾರಸ್ಸು ಕಳಿಸಿದ್ದೆವೆ. ಇದ್ರಲ್ಲಿ ರಾಜಕೀಯ ಮಾಡುವುದು ಬೇಡ. ನಾವು ಯಡಿಯೂರಪ್ಪ, ಅನಂತಕುಮಾರ್, ಸದಾನಂದಗೌಡ ಅವರಿಗೆ ತಲೆ ಬಾಗಿಸುತ್ತೆವೆ.ವಿನಂಮ್ರತೆಯಿಂದ ಮುನ್ನಡೆಯಬೇಕಿದೆ ಅಂದ್ರು. ಇದನ್ನೂ ಓದಿ: ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು
Advertisement
ರಂಭಾಪುರಿ ಶ್ರೀಗಳೂ ನಮ್ಮ ಗುರುಗಳು. ಅವರು ನಮ್ಮ ಬಸವ ತತ್ವಕ್ಕೆ ಒಪ್ಪಿಕೊಳ್ಳುವುದಿಲ್ಲ. ಅವ್ರಿಗೆ ಅವರದ್ದೇ ಆದ ತಾತ್ವಿಕ ಅಭಿಪ್ರಾಯ ಇದೆ. ಹೀಗಾಗಿ ಶೀಘ್ರದಲ್ಲೇ ರಂಭಾಪುರಿ ಶ್ರೀಗಳನ್ನು ಭೇಟಿ ಮಾಡಿ ಅವರ ಮನವೊಲಿಸುತ್ತೆವೆ ಅಂತ ತಿಳಿಸಿದ್ರು. ಇದನ್ನೂ ಓದಿ: ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?
Advertisement
ಈಗ ಜಾಗತಿಕ ಧರ್ಮ ಆಗಲು ಕಾಲ ಪಕ್ವವಾಗಿದೆ. ಜಯದ ಜೊತೆಗೆ ನಾವು ವಿನಂಮ್ರವಾಗಿ ಎಲ್ಲರನ್ನು ಕೂಡಿಸಿಕೊಂಡು ಬಸವ ಧರ್ಮಗಾಗಿ ಒಟ್ಟಾಗಲಿದ್ದೆವೆ. ನಮಗೆ ಬೈದವ್ರನ್ನು ಸೇರಿಸಿಕೊಂಡು ಒಟ್ಟಾಗಿ ಹೋಗುತ್ತೇವೆ. ಈಶ್ವರ ಖಂಡ್ರೆ, ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ, ಯಡಿಯೂರಪ್ಪ ಹೀಗೆ ಎಲ್ಲರನ್ನು ಸೇರಿಸಿಕೊಂಡು ಧರ್ಮ ಸ್ಥಾಪನೆಗೆ ಮುನ್ನಡೆಯಲಿದ್ದೇವೆ ಎಂದರು.
Advertisement
A historic moment. Victory for Basava Revolution after 900 Years. Victory for equality, progressive society and a casteless society. Victory for the those who profess gender equality.
Victory for 12th Century Scientific & Progressive, Basava Philosophy. pic.twitter.com/wfk8EzeHO4
— M B Patil (@MBPatil) March 19, 2018