ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಕಳೆದ ಮೂರು ತಿಂಗಳ ಹಿಂದೆಯೇ ಅಗತ್ಯ ಬಿದ್ದರೆ ಜನರನ್ನು ಬೀದಿಗೆ ತರುತ್ತೇನೆ ಎಂದು ಹೇಳಿದ್ದರು. ಆದರಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಅವರ ಮನೆಯ ಮೇಲೆ ದಾಳಿ ನಡೆಸಿ ಗೂಂಡಾಗಿರಿ ತೋರಿದ್ದು, ಈ ಮೂಲಕ ಸಿಎಂ ಕೆಳ ಮಟ್ಟದ ರಾಜಕಾರಣ ಮಾಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬೆದರಿಕೆಗೆ ನಾವು ಜಗ್ಗಲ್ಲ. ಇದನ್ನೆಲ್ಲ ಎದುರಿಸುವ ಶಕ್ತಿ ನಮಗಿದ್ದು, ಕೇಂದ್ರದ ಗೃಹ ಸಚಿವ ರಾಜನಾಥ್ ಸಿಂಗ್‍ಗೆ ವಿಷಯ ಗಮನಕ್ಕೆ ತರುತ್ತೇವೆ. ಹಾಸನದಲ್ಲಿ ಯುವಕ ಗೆದ್ದು ಬಂದಿದ್ದಾರೆ ಎನ್ನುವುದು ರೇವಣ್ಣ, ದೇವೇಗೌಡ ಅವರಿಗೆ ಸಹಿಸಲು ಆಗುತ್ತಿಲ್ಲ. ಅವರನ್ನು ಬಗ್ಗು ಬಡಿಯಲು ಯತ್ನಿಸಿದರೆ ಅದು ಸಾಧ್ಯವಾಗುವುದಿಲ್ಲ ಎಂದರು. ಇದನ್ನು ಓದಿ: ಸಂಬಂಧ ಇಲ್ಲದೇ ಇರೋ ವಿಷಯದ ಬಗ್ಗೆ ನಾನು ಮಾತನಾಡಲ್ಲ: ಪ್ರೀತಮ್ ಗೌಡ
Advertisement
Advertisement
ಗೂಂಡಾಗಿರಿ ಮಾಡಲು ಸಾಧನೆ ಮಾಡಲು ಯತ್ನಿಸಿದರೆ ಅದು ಪ್ರಯೋಜನ ನೀಡಲ್ಲ. ನಮ್ಮ ಒಬ್ಬ ಕಾರ್ಯಕರ್ತನ ಮೇಲೆ ಹಲ್ಲೆ ಆಗಿದ್ದು, ಆಸ್ಪತ್ರೆ ಸೇರಿದ್ದಾರೆ. ಇವರ ಗೂಂಡಾಗಿರಿ ವಿರುದ್ಧ ಸ್ವತಃ ನಾನೇ ಹಾಸನಕ್ಕೆ ಭೇಟಿ ನೀಡಿ ಸದ್ಯದಲ್ಲೇ ಪ್ರತಿಭಟನಾ ಸಭೆ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದರು. ಇದನ್ನು ಓದಿ: ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ
Advertisement
ಇದೇ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕಿಡಿಕಾರಿದ ಬಿಎಸ್‍ವೈ, ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಲಾಗಿದೆ. ಯಾವ ಕಿಡಿಗೇಡಿಗಳು ಇಂತಹ ಕೃತ್ಯ ನಡೆಸಿದ್ದಾರೆ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ನಿಮ್ಮ ವಿರುದ್ಧವೂ ಕೂಡ ಪ್ರತಿಭಟನೆ ನಡೆಸಬೇಕಾಗುತ್ತದೆ. ಕೇಂದ್ರ ಗೃಹ ಸಚಿವರಿಗೂ ಕೂಡ ಈ ಬಗ್ಗೆ ಮಾಹಿತಿ ನೀಡಿ ಕ್ರಮಕ್ಕೆ ಆಗ್ರಹಿಸುತ್ತೇವೆ ಎಂದು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv