ಬೆಂಗಳೂರು: ಭಾರತ ಸರ್ಕಾರದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ 2022-23 ಸಾಲಿನ ಆಯವ್ಯಯವು ಕೋವಿಡ್-19 ರಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
- Advertisement 2
ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ವಿಶ್ಲೇಷಿಸಿದ್ದಾರೆ. ಇದನ್ನೂ ಓದಿ: Budget 2022: ವರ್ಲ್ಡ್ ಕ್ಲಾಸ್ ಶಿಕ್ಷಣಕ್ಕೆ ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ
- Advertisement 3
- Advertisement 4
ಪ್ರತಿ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತರ್ಹ ವಿಷಯ ಎಂದಿದ್ದಾರೆ. ಇದನ್ನೂ ಓದಿ: Budget: 2022-23ರ ಹೊತ್ತಿಗೆ 5G ಮೊಬೈಲ್ ಸೇವೆ
ದೇಶದ ಪ್ರಮುಖ ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒತ್ತು ನೀಡಿ, 2023 ರ ವರ್ಷವನ್ನು “ಅಂತರಾಷ್ಟ್ರೀಯ ಸಿರಿಧಾನ್ಯ” ವರ್ಷವೆಂದು ಘೋಷಣೆ ಮಾಡಿದ್ದು ಒಟ್ಟಾರೆಯಾಗಿ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವರನ್ನು ಹಾಗೂ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
&