ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಸೋಲಿಗೆ ಕಾರಣವೇನು ಎನ್ನುವುದರ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಮತ್ತು ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು ಅಧಿಕವಾಗಿದ್ದರು. ಈ 2 ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಭರವಸೆ ಇತ್ತು. ಈ ಸೋಲು ಅನಿರೀಕ್ಷಿತವಾಗಿದೆ. ಇದರ ಬಗ್ಗೆ ಸಮಗ್ರ ಚರ್ಚೆ ನಡೆಸಿ, ವಾಸ್ತವದಲ್ಲಿ ಏನಾಗಿದೆ ಎನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದರು.
Advertisement
Advertisement
ಮುಂದಿನ ದಿನಗಳಲ್ಲಿ ಬೆಳಗಾವಿ ಸೋಲಿನ ಬಗ್ಗೆ ಸಿಎಂ ಚರ್ಚೆ ನಡೆಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ರಮೇಶ್ ಜಾರಕಿಹೊಳಿ ಅವರ ತಮ್ಮ ಲಖನ್ ಜಾರಕಿಹೊಳಿ ಪಕ್ಷಾಂತರವಾಗಿ ನಿಲ್ಲಿಸಿರುವುದರ ಬಗ್ಗೆಯೂ ಸಿಎಂ ಅವರೇ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಸಿಎಂ ಅವರ ತೀರ್ಮಾನವೇ ಅಂತಿಮ ಎಂದು ಹೇಳಿದರು. ಇದನ್ನೂ ಓದಿ: ನಾಳೆ ಹೆಚ್‍ಡಿಕೆ ಹುಟ್ಟುಹಬ್ಬ- ಕಾರ್ಯಕರ್ತರಲ್ಲಿ ಮಾಜಿ ಸಿಎಂ ಮನವಿ
Advertisement
Advertisement
ಇದೇ ವೇಳೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧೀವೇಶನದ ಕುರಿತು ಮಾತನಾಡಿದ ಅವರು, ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯಿಂದ 2 ದಿನ ವಿಶೇಷ ಚರ್ಚೆ ನಡೆಸಬೇಕೆಂದು ಸ್ಪೀಕರ್ ಅವರು ತಿಳಿಸಿದ್ದಾರೆ. ಅದಕ್ಕೆ ಸಿಎಂ ಬೊಮ್ಮಾಯಿ ಅವರು ಒಪ್ಪಿಗೆಯನ್ನು ಸೂಚಿಸಿದ್ದಾರೆ. ರಾಜ್ಯದಲ್ಲಿರುವ ತೊಂದರೆ, ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸುಧಾಕರ್ ನಮ್ಮ ಲೀಡರ್ ಅಲ್ಲ, ಮಂಡ್ಯದ ಬಗ್ಗೆ ಅವರಿಗೇನ್ ಮಾಹಿತಿ ಇದೆ?: ನಾರಾಯಣ ಗೌಡ