ಮೈಸೂರು: ವರುಣಾ ಕ್ಷೇತ್ರದ ಟಿಕೆಟ್ ಮಿಸ್ ಹಿನ್ನೆಲೆಯಲ್ಲಿ ಬಿಎಸ್‍ವೈ ಪುತ್ರ ವಿಜಯೇಂದ್ರ ಅವರು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದಾರೆ.
ಮಂಗಳವಾರ ರಾತ್ರಿಯೇ ಮೈಸೂರಿನಿಂದ ಹೊರಟಿದ್ದು, ವಾಪಸ್ ಬರುವುದಾಗಿ ಹೇಳಿ ವಿಜಯೇಂದ್ರ ಬೆಂಗಳೂರಿನತ್ತ ಪ್ರವಾಸ ಕೈಗೊಂಡಿದ್ದಾರೆ. ಮೈಸೂರಿನಲ್ಲಿದ್ದರೆ ಕಾರ್ಯಕರ್ತರು, ಮುಖಂಡರು ಒತ್ತಡ ಹೇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ನಿನ್ನೆ ಸುದ್ದಿಗೋಷ್ಠಿ ನಡೆಸಿದ ವಿಜಯೇಂದ್ರ ಅವರು, ನಾನು ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದರು. ಏ.22 ರಂದು ಕಡೆ ದಿನ ಪ್ರಚಾರ ಮಾಡಿದ್ದರು. ಏ.22ರ ಪ್ರಚಾರದಲ್ಲಿ ತೋಟದ ಬಸವರಾಜು ಅವರು ವಿಜಯೇಂದ್ರ ಜೊತೆಯಲ್ಲೆ ಇದ್ದರು. ಇದನ್ನೂ ಓದಿ: ನಿಮ್ಮ ವಾತ್ಸಲ್ಯಕ್ಕೆ ನಾನು ಚಿರಋಣಿ, ನೋವಾಗಿದ್ದರೆ ಕ್ಷಮೆಯಿರಲಿ: ವಿಜಯೇಂದ್ರ
ತೋಟದ ಬಸವರಾಜು ಅವರು ಬಿಜೆಪಿ ಅಭ್ಯರ್ಥಿ ಅಂತ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಿ.ಫಾರಂ ಸಲ್ಲಿಸದೆ ಕೇವಲ ಬಿಜೆಪಿ ಅಭ್ಯರ್ಥಿ ಅಂತ ನಾಮಪತ್ರ ಸಲ್ಲಿಕೆ ಮಾಡಿದ್ದರು. ಏ.22 ರಂದು ವಿಜಯೇಂದ್ರ ಪರವಾಗಿಯೇ ಮತಯಾಚನೆ ಮಾಡಿದ್ದರು. ಆದ್ರೆ ಏ.23ರಂದು ವಿಜಯೇಂದ್ರಗೆ ಟಿಕೆಟ್ ಮಿಸ್ ಆಯಿತು. ಏ.24ರಂದು ತೋಟದ ಬಸವರಾಜರೇ ಅಧಿಕೃತ ಬಿಜೆಪಿ ಅಭ್ಯರ್ಥಿಯಾಗಿ ಬಿ.ಫಾರಂ ಸಲ್ಲಿಕೆ ಮಾಡಲಾಯಿತು. ಹೀಗಾಗಿ ಕಡೆ ದಿನವೂ ಬಸವರಾಜು ವಿಜಯೇಂದ್ರ ಜೊತೆಯಲ್ಲೆ ಇದ್ದರು. ಇದನ್ನೂ ಓದಿ: ವಿಜಯೇಂದ್ರ ಕ್ಷೇತ್ರಕ್ಕೆ ಬಂದು 20 ದಿನ ಆಯ್ತು, ನಾನು 37 ವರ್ಷಗಳಿಂದ ಬಿಜೆಪಿಗೆ ದುಡಿದಿದ್ದೇನೆ: ವರುಣಾ ಬಿಜೆಪಿ ಅಭ್ಯರ್ಥಿ ಬಸವರಾಜು
ಒಟ್ಟಿನಲ್ಲಿ ಇದೀಗ ಜೊತೆಯಲ್ಲಿದ್ದುಕೊಂಡೇ ತೋಟದ ಬಸವರಾಜು ಅವರು ವಿಜಯೇಂದ್ರ ವಿರುದ್ಧ ಕತ್ತಿ ಮಸೆದ್ರಾ ಎಂಬ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಅಲ್ಲದೇ ವಿಜಯೇಂದ್ರ ಟಿಕೆಟ್ ಮಿಸ್ ವಿಚಾರ ಕೂಡ ತೀವ್ರ ಕುತೂಹಲ ಮೂಡಿಸಿದ್ದು, ವಿಜಯೇಂದ್ರ ಮತ್ತೆ ವಾಪಸ್ ಮೈಸೂರಿಗೆ ಆಗಮಿಸುತ್ತಾರಾ ಅನ್ನೋದನ್ನು ಕಾದು ನೋಡಬೇಕಾಗಿದೆ. ಇದನ್ನೂ ಓದಿ: ನಿಮ್ಮ ಮಗನಿಗಿಂತ ನಮಗೆ ಪಕ್ಷವೇ ಮುಖ್ಯ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ಬಿಎಸ್‍ವೈಗೆ ಅಮಿತ್ ಶಾ ಸೂಚನೆ