Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್ ಮಂಡನೆ ಆಗುವುದು ಹೇಗೆ? ಅಧಿಕಾರಿಗಳು ರಹಸ್ಯ ಹೇಗೆ ಕಾಪಾಡುತ್ತಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಜೆಟ್ ಮಂಡನೆ ಆಗುವುದು ಹೇಗೆ? ಅಧಿಕಾರಿಗಳು ರಹಸ್ಯ ಹೇಗೆ ಕಾಪಾಡುತ್ತಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ

Latest

ಬಜೆಟ್ ಮಂಡನೆ ಆಗುವುದು ಹೇಗೆ? ಅಧಿಕಾರಿಗಳು ರಹಸ್ಯ ಹೇಗೆ ಕಾಪಾಡುತ್ತಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ

Public TV
Last updated: January 31, 2018 1:21 pm
Public TV
Share
4 Min Read
budget Halwa
SHARE

ನವದೆಹಲಿ: 2018-19ರ ಸಾಲಿನ ಬಜೆಟ್ ಈ ಬಾರಿ ಫೆಬ್ರವರಿ 1 ರಂದು ಅಂದರೆ ನಾಳೆ ಮಂಡನೆಯಾಗಲಿದೆ. ಹೀಗಾಗಿ ಬಜೆಟ್ ಮಂಡನೆ ಹೇಗೆ ಆಗುತ್ತದೆ? ತಯಾರಿ ಹೇಗೆ ನಡೆಯುತ್ತದೆ ಇತ್ಯಾದಿ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

5 ತಿಂಗಳಿನಿಂದ ಸಿದ್ಧತೆ: ಬಜೆಟ್ ಮಂಡನೆಗೆ 5 ತಿಂಗಳು ಇರುವಂತೆಯೇ ಸಿದ್ಧತೆಗಳು ಆರಂಭವಾಗುತ್ತದೆ. ಸೆಪ್ಟೆಂಬರ್ ನಲ್ಲಿ ಹಣಕಾಸು ಸಚಿವಾಲಯ ಕೇಂದ್ರ ಸರ್ಕಾರದ ಸಚಿವಾಲಯಗಳಿಗೆ ಟಿಪ್ಪಣಿಯೊಂದನ್ನು ಕಳುಹಿಸಿ ಖರ್ಚು ವೆಚ್ಚಗಳ ವಿವರ ಪಡೆದುಕೊಳ್ಳುತ್ತದೆ. ಇದರೊಂದಿಗೆ ಮುಂದಿನ ವರ್ಷದ ಹಣಕಾಸು ಲೆಕ್ಕಾಚಾರದ ಅಂದಾಜನ್ನೂ ಪಡೆದುಕೊಳ್ಳುತ್ತದೆ.

ನಿರಂತರ ಸಭೆ: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಖರ್ಚು ವೆಚ್ಚಗಳ ಕಾರ್ಯದರ್ಶಿ, ಕೆಲವು ಇಲಾಖೆಗಳ ಹಣಕಾಸು ಸಲಹೆಗಾರರ ಜತೆ ಸಭೆಗಳನ್ನು ನಡೆಸಿ ಇಲಾಖಾವಾರು ವೆಚ್ಚಗಳ ಪರಿಶೀಲನೆ ನಡೆಸಲಾಗುತ್ತದೆ. ಇದೇ ಸಂದರ್ಭದಲ್ಲಿ ಮುಂದಿನ ವರ್ಷದ ಪ್ರಸ್ತಾವನೆಯ ಕುರಿತಂತೆಯೂ ಚರ್ಚೆ ನಡೆಸಲಾಗುತ್ತದೆ. ಹೀಗೆ ಸಿಕ್ಕ ಖರ್ಚು ವೆಚ್ಚದ ವಿವರಗಳನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದ ತಂಡಕ್ಕೆ ಒಪ್ಪಿಸಲಾಗುತ್ತದೆ. ಬಳಿಕ ಆದಾಯ, ಹೊಸ ಪ್ರಸ್ತಾವನೆ, ಸುಂಕ ಏರಿಕೆಯ ಮೂಲಕ ಹೆಚ್ಚಿನ ನಿಧಿ ಸಂಗ್ರಹಣೆ, ಹಣದ ಕೊರತೆ ಮತ್ತು ಇನ್ನಿತರ ಅಂಕಿ ಸಂಖ್ಯೆಗಳ ಕುರಿತಂತೆ ತಂಡದ ಸದಸ್ಯರು ಚರ್ಚೆ ನಡೆಸುತ್ತಾರೆ. ಈ ಸಭೆಗೆ ಕೇಂದ್ರೀಯ ನೇರ ತೆರಿಗೆ ಮಂಡಳಿ ಮತ್ತು ಕೇಂದ್ರೀಯ ನೇರ ಅಬಕಾರಿ ತೆರಿಗೆ ಮಂಡಳಿ ಈ ಎರಡೂ ಸಂಸ್ಥೆಗಳನ್ನೂ ಸಭೆಗೆ ಕರೆಯಲಾಗುತ್ತದೆ.

arun jaitley budget 4

ಆರ್ಥಿಕ ಸಮೀಕ್ಷೆ ಆರಂಭ: ಬಜೆಟ್‍ನ ಪ್ರಧಾನ ತಂಡ ಚರ್ಚೆ ನಡೆಸಿದ ವಿಷಯದ ಮೇಲೆ ಬಜೆಟ್ ಪ್ರಸ್ತಾವನೆಗಳ ಒಂದು ನೀಲ ನಕ್ಷೆಯನ್ನು ರೆಡಿ ಮಾಡಲಾಗುತ್ತದೆ. ಆದರೆ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಈ ನೀಲ ನಕ್ಷೆಯ ಪ್ರತಿಗಳನ್ನು ಹಿರಿಯ ಅಧಿಕಾರಿಗಳು ನಾಶಪಡಿಸುತ್ತಾರೆ. ಬಳಿಕ ನವೆಂಬರ್ ಅಂತ್ಯಕ್ಕಾಗುವಾಗ ಕೆಲ ಪ್ರಮುಖ ಸಿಬ್ಬಂದಿಗಳಿಗೆ ಮಾತ್ರ ಹಣಕಾಸು ಸಚಿವಾಲಯದ ಕಚೇರಿಯ ಒಳಗಡೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಮಾತ್ರವಲ್ಲದೇ ಕಚೇರಿಯ ಸುತ್ತ ಗುಪ್ತಚರ ಸಂಸ್ಥೆಗೆ ಒಪ್ಪಿಸಲಾಗುತ್ತದೆ. ಈ ವೇಳೆ ಮುಖ್ಯ ಆರ್ಥಿಕ ಸಲಹೆಗಾರರ ಮೇಲುಸ್ತುವಾರಿಯಲ್ಲಿ ಸಮೀಕ್ಷೆಯ ಕಾರ್ಯವನ್ನು ನಡೆಸಲಾಗುತ್ತದೆ. ಈ ಮೂಲಕ ಬಜೆಟ್ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆಯುತ್ತದೆ.

ಅಂಕಿ ಅಂಶ ತಯಾರಿ: ಹಣಕಾಸು ಸಚಿವಾಲಯ, ನೀತಿ ಆಯೋಗ ಮತ್ತು ಇತರೆ ಸಚಿವಾಲಯಗಳ ಅಧಿಕಾರಿಗಳು ಸಭೆ ನಡೆಸಿ ಬಜೆಟ್ ಅಂಕಿ ಅಂಶಗಳನ್ನು ತಯಾರಿಸುತ್ತಾರೆ. ಖರ್ಚುಗಳನ್ನು ಆಧರಿಸಿ ಹಣಕಾಸು ಸಚಿವಾಲಯವು ಕೆಲವೊಂದು ಮಾರ್ಗಸೂಚಿಯನ್ನು ಪ್ರಕಟಿಸುತ್ತದೆ. ಇದಕ್ಕೆ ಅನುಗುಣವಾಗಿ ವಿವಿಧ ಸಚಿವಾಲಯಗಳು ಬೇಡಿಕೆಯನ್ನು ಸಲ್ಲಿಸುತ್ತವೆ. ಹಣಕಾಸು ಸಚಿವಾಲಯದ ಅಧೀನದಲ್ಲಿರುವ ಆರ್ಥಿಕ ವ್ಯವಹಾರಗಳ ಇಲಾಖೆಯ ಬಜೆಟ್ ವಿಭಾಗವು ಇದನ್ನು ಸಿದ್ಧಪಡಿಸುತ್ತದೆ.

arun jaitley budget 3

ಪ್ರಧಾನಿ ಎಂಟ್ರಿ: ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಪ್ರಧಾನಿ ಬಜೆಟ್‍ನಲ್ಲಿ ತಮ್ಮನ್ನೂ ತೊಡಗಿಸಿಕೊಳ್ಳುತ್ತಾರೆ. ಹಣಕಾಸು ಸ್ಥಿತಿಗತಿ, ಹೊಸ ಯೋಜನೆಗಳು, ಖರ್ಚುವೆಚ್ಚಗಳಿಗೆ ನೀಡಬೇಕಾದ ಆದ್ಯತೆ, ಹೆಚ್ಚುವರಿ ಆದಾಯ ಕ್ರಮಗಳು ಹೀಗೆ ಬಜೆಟ್‍ನ ರೂಪುರೇಷೆಗಳ ಕುರಿತಂತೆ ಹಣಕಾಸು ಸಚಿವಾಲಯದ ಜತೆ ಪ್ರಧಾನಿ ಚರ್ಚೆ ನಡೆಸುತ್ತಾರೆ. ಪ್ರಧಾನಿ ಮತ್ತು ಹಣಕಾಸು ಸಚಿವರ ಮಧ್ಯೆ ಬಜೆಟ್ ಕುರಿತಂತೆ ಹಲವು ಸುತ್ತಿನ ಮಾತುಕತೆಗಳು ನಡೆಯುತ್ತವೆ.

ಕರಡು ಬಜೆಟ್ ಮುದ್ರಣ: ಇನ್ನು ಬಜೆಟ್‍ಗೆ ಕೆಲವೇ ವಾರಗಳು ಬಾಕಿಯಿರುವ ವೇಳೆಯಲ್ಲಿ ಕಡತಗಳನ್ನು ಸಂಗ್ರಹ ಮಾಡಲಾಗುತ್ತದೆ. ಇಲ್ಲಿಯವರೆಗೆ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ವಿವಿಧ ಸಚಿವಾಲಯಗಳು ನೀಡಿದ ಅಂಕಿ-ಅಂಶಗಳನ್ನು ಆಧರಿಸಿ ರೂಪಿಸಿದ ಕರಡು ಬಜೆಟ್ ಪ್ರತಿಯನ್ನು ಹಣಕಾಸು ಸಚಿವಾಲಯದಲ್ಲಿರುವ ಮುದ್ರಣಾಲಯಕ್ಕೆ ಕಳುಹಿಸಲಾಗುತ್ತಿತ್ತು. ಕಳೆದ ವರ್ಷದಿಂದ ಫೆಬ್ರವರಿ ಮೊದಲ ವಾರದಲ್ಲೇ ಬಜೆಟ್ ಮಂಡನೆಯಾಗುವುದರಿಂದ ಜನವರಿ ತಿಂಗಳಲ್ಲೇ ಮುದ್ರಣಕ್ಕೆ ಕಳುಹಿಸಲಾಗುತ್ತದೆ.

arun jaitley budget 2

ಸಿಬ್ಬಂದಿಗೆ ಗೃಹಬಂಧನ!: ಬಜೆಟ್ ಪ್ರತಿ ಮುದ್ರಣಕ್ಕೆ ಕಳುಹಿಸುವ ಮೊದಲು ಹಲ್ವಾ ಕಾಯಿಸುವ ಸಂಪ್ರದಾಯವಿದೆ. ಹಣಕಾಸು ಸಚಿವರು ನಾರ್ತ್ ಬ್ಲಾಕ್‍ನಲ್ಲಿರುವ ಕಚೇರಿಯಲ್ಲಿ ದೊಡ್ಡ ಕಡಾಯಿಯಲ್ಲಿ ಹಲ್ವಾ ಕಾಯಿಸುತ್ತಾರೆ. ಕೆಲವು ತಿಂಗಳಿನಿಂದ ಬಜೆಟ್ ತಯಾರಿಸಿದ ಸಿಬ್ಬಂದಿ ಸಂಭ್ರಮದಿಂದ ಪಾಲ್ಗೊಳ್ಳುತ್ತಾರೆ. ಬಜೆಟ್ ಅಧಿವೇಶನಕ್ಕೆ ಅಂದಾಜು ಹತ್ತು ದಿನ ಮೊದಲು ಈ ಕಾರ್ಯಕ್ರಮ ನಡೆಯುತ್ತದೆ.

ಬಜೆಟ್ ಮುದ್ರಣದ ವೇಳೆ ಮುದ್ರಣಾಲಯದಲ್ಲಿ ಕಾರ್ಯನಿರ್ವಹಿಸಿರುವ ಸಿಬ್ಬಂದಿಗೆ ಗೃಹ ಬಂಧನ ವಿಧಿಸಲಾಗುತ್ತದೆ. ಹಣಕಾಸು ಸಚಿವಾಲಯ ಅಧಿಕಾರಿಗಳು, ಹಣಕಾಸು ಮಸೂದೆ ಮತ್ತು ಕಾರ್ಯಸೂಚಿ ಮಸೂದೆಯನ್ನು ಸಿದ್ಧಪಡಿಸಿದ ಕಾನೂನು ಸಚಿವಾಲಯದ ಸಿಬ್ಬಂದಿಯ ಫೋನ್, ಇಮೇಲ್ ವ್ಯವಹಾರ ಬಂದ್ ಆಗುತ್ತದೆ. ಹಿರಿಯ ಅಧಿಕಾರಿಗಳಿಗೆ ಮಾತ್ರ ಮನೆಗೆ ತೆರಳುವ ಅನುಮತಿ ನೀಡಲಾಗುತ್ತದೆ. ಬಜೆಟ್ ಮಂಡನೆಯಾದ ಬಳಿಕವಷ್ಟೇ ಸಿಬ್ಬಂದಿ ಮನೆಗೆ ತೆರಳುತ್ತಾರೆ. ಇದನ್ನೂ ಓದಿ: ಹಣಕಾಸು ಸಚಿವರು ಬಜೆಟ್‍ಗೂ ಮುನ್ನ ಈ ಸೂಟ್‍ಕೇಸ್ ತರೋದು ಯಾಕೆ?

ಬಜೆಟ್ ಮಂಡನೆ ಹೇಗೆ? ಬಜೆಟ್‍ನ ದಿನದಂದು ಹಣಕಾಸು ಸಚಿವರು ಮೊದಲು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಬಜೆಟ್‍ಗೆ ಅವರಿಂದ ಸಹಿ ಪಡೆದುಕೊಳ್ಳುತ್ತಾರೆ. ಬಳಿಕ ಸಂಪುಟ ಸಭೆ ನಡೆಸಲಾಗುತ್ತದೆ. ಈ ವೇಳೆ ಹಣಕಾಸು ಸಚಿವರು ಬಜೆಟ್ ನಲ್ಲಿರುವ ಅಂಶಗಳ ಕುರಿತಂತೆ ಸಂಕ್ಷಿಪ್ತ ಮಾಹಿತಿ ನೀಡುತ್ತಾರೆ. ಆದರೆ, ತೆರಿಗೆ ಪ್ರಸ್ತಾವನೆಗಳ ಕುರಿತಂತೆ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ. 11 ಗಂಟೆಗೆ ಬಜೆಟ್ ಮಂಡಿಸಲಾಗುತ್ತದೆ. ಇದಕ್ಕೆ ಕೆಲವೇ ನಿಮಿಷಗಳಷ್ಟೇ ಬಾಕಿ ಇರುವಂತೆ ಪ್ರಧಾನಿ ಅವರು ಹಣಕಾಸು ಸಚಿವರನ್ನು ಲೋಕಸಭೆಗೆ ಕರೆತಂದು ಆಸನದಲ್ಲಿ ಕೂರಿಸುತ್ತಾರೆ. ಬಳಿಕ ಸ್ಪೀಕರ್ ಅವರಿಂದ ಅನುಮತಿ ಪಡೆದು ಹಣಕಾಸು ಸಚಿವರು ಬಜೆಟ್ ಪ್ರತಿಯನ್ನು ಓದಲು ಆರಂಭಿಸುತ್ತಾರೆ.

Arun Jaitley 2017 Budget

ಮೊದಲೇ ಯಾಕೆ?: ಇಲ್ಲಿಯವರೆಗೆ ಫೆಬ್ರವರಿ ಕೊನೆಯ ದಿನಾಂಕದಂದು ಬಜೆಟ್ ಮಂಡನೆಯಾಗುತಿತ್ತು. ಆದರೆ ಈ ಬಜೆಟ್‍ಗೆ ಮಾರ್ಚ್ 31ರೊಳಗೆ ಸಂಸತ್ತಿನ ಅನುಮೋದನೆ ಸಿಗುತ್ತಿರಲಿಲ್ಲ. ಹೀಗಾಗಿ ಅಲ್ಲಿಯವರೆಗೆ ಎರಡು ತಿಂಗಳ ಅವಧಿಗೆ ಲೇಖಾನುದಾನಕ್ಕೆ ಒಪ್ಪಿಗೆ ಪಡೆಯಬೇಕಿತ್ತು. ಇದಾದ ಬಳಿಕ ಅನುಮೋದನೆ ಪಡೆದು ಪೂರ್ಣ ಪ್ರಮಾಣದಲ್ಲಿ ಬಜೆಟ್ ಅನುಷ್ಠಾನ ಮಾಡುವ ವೇಳೆ ಮೂರು, ನಾಲ್ಕು ತಿಂಗಳು ಕಳೆದು ಹೋಗುತಿತ್ತು. ಈ ಲೇಖಾನುದಾನ ಪಡೆಯುವುದನ್ನು ತಪ್ಪಿಸಲು ಮತ್ತು ಏಪ್ರಿಲ್‍ನಿಂದ ಆರಂಭವಾಗುವ ಹಣಕಾಸು ವರ್ಷದಿಂದಲೇ ಬಜೆಟ್ ಅನುಷ್ಠಾನಗೊಳಿಸಲು 2017ರಿಂದ ಜನವರಿ 31 ರಿಂದ ಬಜೆಟ್ ಅಧಿವೇಶನ ಆರಂಭಗೊಳ್ಳುತ್ತಿದೆ.

 

TAGGED:Arun JaitleybudgetFinance MinisterHalvalok sabhaPublic TVಅರುಣ್ ಜೇಟ್ಲಿಪಬ್ಲಿಕ್ ಟಿವಿಬಜೆಟ್ಲೋಕಸಭೆಹಣಕಾಸು ಸಚಿವಹಲ್ವಾ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
8 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
10 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?