ನವದೆಹಲಿ: 2019 ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಕೊನೆಯ ಬಜೆಟ್ ಮಂಡನೆ ಮಾಡಿದ್ದು, ಈ ವೇಳೆ ಸಣ್ಣ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂ. ನಗದು ಹಣವನ್ನು ವರ್ಗಾವಣೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ.
ರೈತರ ಖಾತೆಗೆ ನೇರ ನಗದು ಯೋಜನೆಯ ಪೂರ್ಣ ಪ್ರಮಾಣದ ಹಣವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಾಡಿ 75 ಸಾವಿರ ಕೋಟಿ ರೂ. ವೆಚ್ಚ ಆಗಲಿದೆ. 2 ಹೆಕ್ಟೇರ್ ಪ್ರದೇಶಕ್ಕಿಂತ ಕಡಿಮೆ ಭೂಮಿಯನ್ನು ಹೊಂದಿರುವ ರೈತರನ್ನು ಯೋಜನೆಗೆ ಆಯ್ಕೆ ಮಾಡಲಾಗಿದ್ದು, ಮೂರು ಹಂತದಲ್ಲಿ ಹಣ ಬಿಡುಗಡೆ ಆಗಲಿದೆ. ಈ ಯೋಜನೆಯಿಂದ ಸುಮಾರು 12 ಕೋಟಿ ಸಣ್ಣ ರೈತರಿಗೆ ಅನುಕೂಲ ಆಗಲಿದೆ. ಈ ಯೋಜನೆ 2018 ಡಿಸೆಂಬರ್ 1 ರಿಂದ ಪೂರ್ವಾನ್ವಯವಾಗಲಿದೆ ಎಂದು ಗೋಯಲ್ ತಿಳಿಸಿದರು.
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ಜವಾಬ್ದಾರಿಯನ್ನು ಹೊತ್ತಿರುವ ಸಚಿವ ಫಿಯೂಷ್ ಗೋಯಲ್ ಅವರು ಬಜೆಟ್ ಮಂಡನೆ ಮಾಡಿದ್ದಾರೆ. ಇದರೊಂದಿಗೆ ರೈಲ್ವೇ ಬಜೆಟ್ ಕೂಡ ಇಂದೇ ಮಂಡನೆ ಆಗಲಿದೆ. ಲೋಕಸಭಾ ಚುನಾವಣೆಯನ್ನು ಗುರಿಯಾಗಿಕೊಂಡು ಮಂಡನೆ ಆಗಿರುವ ಬಜೆಟ್‍ನಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಕೂಡ ಹೊಸ ಪಿಂಚಣಿ ಯೋಜನೆಯನ್ನು ಜಾರಿ ಮಾಡಿದ್ದು, ಇದರ ಅನ್ವಯ ಫಲಾನುಭವಿಗಳಿಗೆ ವಾರ್ಪಿಕ 3 ಸಾವಿರ ರೂ. ಲಭಿಸಲಿದೆ. ಅಲ್ಲದೇ ಮನ್ರೇಗಾ (ಎಂಎನ್‍ಆರ್‍ಇಜಿಎ) ಯೋಜನೆ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv