ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಮಂಡಿಸಿದ 2022-23ನೇ ಸಾಲಿನ ಕೇಂದ್ರ ಬಜೆಟ್‍ನಲ್ಲಿ, 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸುವ ಗುರಿಯನ್ನು ಹಾಕಲಾಗಿದೆ.
Advertisement
2022-23ನೇ ಸಾಲಿನ ಬಜೆಟ್‍ನಲ್ಲಿ ರಾಷ್ಟ್ರೀಯ ಹೆದ್ದಾರಿ 25 ಸಾವಿರ ಕಿ.ಮೀ ವಿಸ್ತರಣೆ ಜೊತೆಗೆ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣಕ್ಕಾಗಿ 20 ಸಾವಿರ ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಇದು 25 ವರ್ಷಗಳ ದೂರದೃಷ್ಟಿಯ ಬಜೆಟ್: ನಿರ್ಮಲಾ ಸೀತಾರಾಮನ್
Advertisement
Advertisement
ಪಬ್ಲಿಕ್-ಪ್ರೈವೇಟ್ (ಪಿಪಿಪಿ) ಸಹಭಾಗಿತ್ವದಲ್ಲಿ ರೈಲ್ವೇ ವಿಭಾಗದಲ್ಲಿ ನಾಲ್ಕು ಕಡೆ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣದ ಗುರಿ ಹೊಂದಲಾಗಿದ್ದು, ಈ ಯೋಜನೆಯಿಂದ ಸ್ಥಳೀಯ ಬಿಸಿನೆಸ್ ಬೆಳವಣಿಗೆಗೆ ಒತ್ತುಕೊಡಲಾಗಿದೆ. 2 ಸಾವಿರ ಕಿ.ಮಿ ರೈಲ್ವೇ ಕವಚ ಯೋಜನೆಯಡಿ ರೈಲು ಮಾರ್ಗಗಳ ವಿಸ್ತರಣೆಗೆ ಯೋಜನೆ ರೂಪಿಸಲಾಗಿದೆ. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – TDS ಹೆಚ್ಚಳ
Advertisement
400 ಹೊಸ ವಂದೇ ಭಾರತ್ ರೈಲುಗಳ ತಯಾರಿಯಾ ಗುರಿಯನ್ನು ಮುಂದಿನ 3 ವರ್ಷಗಳಲ್ಲಿ ಇಟ್ಟುಕೊಂಡಿದ್ದು, ಜೊತೆಗೆ 100 ಪಿಎಂ ಘಾಟಿಶಕ್ತಿ ಕಾರ್ಗೋ ಟರ್ಮಿನಲ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಬಜೆಟ್‍ನಲ್ಲಿ ವಿಶೇಷ ಒತ್ತು ನೀಡಲಾಗಿದೆ. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿಗೆ ಭಾರತ ಎಂಟ್ರಿ – ಆರ್‌ಬಿಐ ನೀಡಲಿದೆ ಡಿಜಿಟಲ್ ರುಪಿ