ನವದೆಹಲಿ: ಸಂಸತ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಡಿಜಿಟಲ್ ಆಧಾರಿತ ಆರೋಗ್ಯ ಸೇವೆಗೆ ಆದ್ಯತೆ ನೀಡಲಾಗಿದೆ.
ದೇಶಾದ್ಯಂತ ಆರೋಗ್ಯ ಮತ್ತು ವೈದ್ಯಕೀಯ ಸೇವೆ ಒದಗಿಸುವಲ್ಲಿ ಡಿಜಿಟಲ್ ತಂತ್ರಜ್ಞಾನ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಹೊಸ ಡಿಜಿಟಲ್ ಆಧಾರಿತ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Budget: 2 ಲಕ್ಷ ಅಂಗನವಾಡಿಗಳನ್ನು ‘ಸಕ್ಷಮ್ ಅಂಗನವಾಡಿ’ಗಳಾಗಿ ಮಾರ್ಪಾಡು – ಮಹಿಳಾ ಸಬಲೀಕರಣಕ್ಕೆ ಒತ್ತು
Advertisement
Advertisement
ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮ
ಕೋವಿಡ್ ಸಾಂಕ್ರಾಮಿಕವು ಎಲ್ಲಾ ವಯಸ್ಸಿನ ಜನರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಹೆಚ್ಚಿಸಿದೆ. ಗುಣಮಟ್ಟದ ಮಾನಸಿಕ ಆರೋಗ್ಯ ಸಮಾಲೋಚನೆ ಮತ್ತು ಆರೈಕೆ ಸೇವೆಗಳನ್ನು ಒದಗಿಸುವ ಸಲುವಾಗಿ ʼರಾಷ್ಟ್ರೀಯ ಟೆಲಿ-ಮೆಂಟಲ್ ಹೆಲ್ತ್ ಕಾರ್ಯಕ್ರಮʼ ಘೋಷಿಸಲಾಗಿದೆ. ಇದು 23 ಟೆಲಿ-ಮೆಂಟಲ್ ಆರೋಗ್ಯ ಉತ್ಕೃಷ್ಟ ಕೇಂದ್ರಗಳ ಜಾಲವನ್ನು ಒಳಗೊಂಡಿರುತ್ತದೆ. ನಿಮ್ಹಾನ್ಸ್ ಇದಕ್ಕೆ ನೋಡಲ್ ಕೇಂದ್ರವಾಗಿದೆ. ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ-ಬೆಂಗಳೂರು (ಐಐಐಟಿಬಿ) ತಾಂತ್ರಿಕ ಬೆಂಬಲವನ್ನು ಒದಗಿಸುತ್ತದೆ. ಇದನ್ನೂ ಓದಿ: Budget 2022: ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
Advertisement
Advertisement
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್
ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಗಾಗಿ ಹೊಸ ಮುಕ್ತ ವೇದಿಕೆಯನ್ನು ಹೊರತರಲಾಗುವುದು. ಇದು ಆರೋಗ್ಯ ಪೂರೈಕೆದಾರರು ಮತ್ತು ಆರೋಗ್ಯ ಸೌಲಭ್ಯಗಳ ಡಿಜಿಟಲ್ ದಾಖಲಾತಿಗಳನ್ನು ಸಮಗ್ರವಾಗಿ ಒಳಗೊಂಡಿರುತ್ತದೆ.