ನವದೆಹಲಿ: ಮನೆ ಕಟ್ಟೋರಿಗೆ ಕೇಂದ್ರ ಸರ್ಕಾರ ಬಜೆಟ್ ಮೂಲಕ ಗುಡ್‌ನ್ಯೂಸ್ ಕೊಟ್ಟಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ (Pradhan Mantri Awas Yojana) 79 ಸಾವಿರ ಕೋಟಿ ಅನುದಾನ ಘೋಷಿಸಿದೆ.
ಬುಧವಾರ 2023-24ನೇ ಸಾಲಿನ ಬಜೆಟ್ (Union Budget 2023) ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು, ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ (PMAY) 79 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕಳೆದ ವರ್ಷದ ಅನುದಾನಕ್ಕೆ ಹೋಲಿಸಿದರೆ ಶೇಕಡಾ 66ರಷ್ಟು ಹೆಚ್ಚು. ಈ ಯೋಜನೆಯಡಿ 80 ಲಕ್ಷ ಮಂದಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್ʼ
Advertisement
Advertisement
ಕಳೆದ ಬಜೆಟ್‌ನಲ್ಲಿ ಎಲ್ಲರಿಗೂ ಮನೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 84 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಕಳೆದ ವರ್ಷದ ಬಜೆಟ್‌ನಲ್ಲಿ ಸಚಿವರು 48,000 ಕೋಟಿ ಮೀಸಲಿಟ್ಟಿದ್ದರು. ಪ್ರಸ್ತುತ ಬಜೆಟ್‌ನಲ್ಲಿ ಈ ಯೋಜನೆಗಾಗಿ ಸುಮಾರು ಶೇ.65 ಹೆಚ್ಚಿನ ಹಣವನ್ನು ಮೀಸಲಿಡಲಾಗಿದೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?
Advertisement
Advertisement
ಪ್ರಧಾನಮಂತ್ರಿ ಆವಾಸ್ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಇದು ಸಮಾಜದ ದುರ್ಬಲ ವರ್ಗಗಳಿಗೆ (EWS/LIG and MIG) ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಗುರಿ ಹೊಂದಿದೆ. ಇದನ್ನು 2015 ರಲ್ಲಿ ಪ್ರಾರಂಭಿಸಲಾಯಿತು. ಇದನ್ನೂ ಓದಿ: ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಬಜೆಟ್: ಸಿದ್ದರಾಮಯ್ಯ ವಾಗ್ದಾಳಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k