ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ರಾಜ್ಯ ಬಜೆಟ್‍ನಲ್ಲಿ ಬಂಪರ್ ಅನುದಾನ ಸಿಕ್ಕಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಬಜೆಟ್‍ನಲ್ಲಿ 100 ಕೋಟಿ ರೂ. ಘೋಷಣೆ ಮಾಡಲಾಗಿದೆ.
ದಾವಣಗೆರೆಯಲ್ಲಿ ಉಪಚುನಾವಣೆ (Davanagere By-Election) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಧಿಕಾರ ಹಿಡಿಯಲು ಪೈಪೋಟಿ ನಡೆಸುತ್ತಿವೆ. ಇದರ ನಡುವೆ ಬಿಜೆಪಿಯಲ್ಲಿ ಬಣ ಬಡಿದಾಟ ಆರಂಭವಾಗಿದೆ. ಈ ಹೊತ್ತಲ್ಲಿ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಘೋಷಣೆಯಾಗಿರುವುದು ಚುನಾವಣೆಯಲ್ಲಿ ಯಾವ ಪರಿಣಾಮ ಬೀರಲಿದೆ ಎಂಬುದು ಫಲಿತಾಂಶದ ಬಳಿಕವೇ ತಿಳಿಯಬೇಕಿದೆ. ಇದನ್ನೂ ಓದಿ: ಶಾಮನೂರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣೆಗೆ ಸಿದ್ಧತೆ
ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನದ ನಂತರ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ಸಮೀಪಿಸುತ್ತಿದೆ. ಇನ್ನೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಬಿಜೆಪಿ ಗೆಲುವು ಸಾಧಿಸಿಲ್ಲ. ಯಾವಾಗಲೂ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರೇ ಗೆಲುವು ಸಾಧಿಸುತ್ತಿದ್ದರು. ಇದನ್ನೂ ಓದಿ: ದಾವಣಗೆರೆ ದಕ್ಷಿಣ ಉಪಚುನಾವಣೆ ಕಾವು – ಟಿಕೆಟ್‌ಗಾಗಿ ಕಮಲ ಪಾಳಯದಲ್ಲಿ ಫೈಟ್

