ನವದೆಹಲಿ: ಇಂದು ನಡೆಯುವ ಕೇಂದ್ರ ಸರ್ಕಾರದ ಬಜೆಟ್‍ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಮಂಡಿಸಲಿದ್ದು, ಈಗಾಗಲೇ ದೆಹಲಿಯ ನಾರ್ತ್ ಬ್ಲಾಕ್‍ನಲ್ಲಿರುವ ಹಣಕಾಸು ಸಚಿವಾಲಯದ ಕಚೇರಿ ತಲುಪಿದ್ದಾರೆ. ಅಲ್ಲಿ ಅಧಿಕಾರಿಗಳೊಟ್ಟಿಗೆ ಸಭೆ ನಡೆಸಲಿದ್ದಾರೆ. ಅದಾದ ಬಳಿಕ ರಾಷ್ಟ್ರಪತಿ ಭವನದಲ್ಲಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್‍ರನ್ನು ಭೇಟಿಯಾಗಿ ಸಂಸತ್ತಿಗೆ ತೆರಳಲಿದ್ದಾರೆ.
ಸಂಸತ್ತಿನ ಬಜೆಟ್ ಅಧಿವೇಶನ ನಿನ್ನೆಯಿಂದ ಪ್ರಾರಂಭವಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
ಕೋವಿಡ್ ಸೋಂಕು ಹರಡುವ ಭೀತಿಯಿಂದಾಗಿ ಇದು ಎರಡನೇ ಕಾಗದರಹಿತ ಬಜೆಟ್ ಆಗಿದೆ. ಸೋಮವಾರ, ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದರು. ಇದು ಜಿಡಿಪಿ ಬೆಳವಣಿಗೆಯನ್ನು 8 ರಿಂದ 8.5% ರಷ್ಟು ಆಶಾದಾಯಕವಾಗಿ ನಿಗದಿಪಡಿಸಿದೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?