ಧಾರವಾಡ: ಕೇಂದ್ರ ಬಜೆಟ್‍ನಲ್ಲಿ ನೀರಾವರಿಗೆ ವಿಶೇಷ ಒತ್ತನ್ನು ಕೊಟ್ಟಿಲ್ಲ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು.
ಕೇಂದ್ರ ಬಜೆಟ್ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್‍ನಲ್ಲಿ ರಾಜ್ಯಕ್ಕೆ ಅನುಕೂಲ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿಗೆ ಭಾರತ ಎಂಟ್ರಿ – ಆರ್‌ಬಿಐ ನೀಡಲಿದೆ ಡಿಜಿಟಲ್ ರುಪಿ
Advertisement
Advertisement
ಸಿದ್ದರಾಮಯ್ಯನವರ ಮಹದಾಯಿ ಪಾದಯಾತ್ರೆ ಹೇಳಿಕೆ ವಿಚಾರವಾಗಿ ಮಾತನಾಡಿ, ನಮ್ಮ ನಾಯಕರ ತೀರ್ಮಾನವನ್ನು ನಾವು ಬೆಂಬಲಿಸಬೇಕಾಗುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕಾಂಗ್ರೆಸ್ ಯಾವತ್ತೂ ಕಾರ್ಯಕ್ರಮ ಮಾಡಿದೆ. ನೀರಾವರಿ ಯೋಜನೆಗಳಿಗಾಗಿ ಸಿದ್ದರಾಮಯ್ಯನವರ ಸರ್ಕಾರ 60 ಸಾವಿರ ಕೋಟಿ ಖರ್ಚು ಮಾಡಿದ ನಿದರ್ಶನ ಇದೆ. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ನೀರಾವರಿಗೆ ವಿಶೇಷ ಒತ್ತು ಕೊಟ್ಟಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: Budget 2022: ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನಕ್ಕೆ 200 ಕೋಟಿ ನೆರವು
Advertisement
ಕೃಷಿ ಕ್ಷೇತ್ರಕ್ಕಾಗಿ ದುಡ್ಡು ಬಿಡುಗಡೆ ಮಾಡಿಲ್ಲ. ಜನರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ. ಕೇಂದ್ರದಿಂದ ಬರಬೇಕಾದ ನಮ್ಮ ತೆರಿಗೆ ಹಣವೇ ನಮಗೆ ಬಂದಿಲ್ಲ. 7 ವರ್ಷಗಳಿಂದ ಕೇಂದ್ರದಲ್ಲಿ ಹಾಗೂ 3 ವರ್ಷಗಳಿಂದ ರಾಜ್ಯದಲ್ಲಿ ಇವರು ಮಾತನಾಡುತ್ತಲೇ ಇದ್ದಾರೆ. ಮೋದಿ ಅವರು ತಮ್ಮನ್ನೇ ಬೆಳೆಸಿಕೊಳ್ಳುತ್ತಿದ್ದಾರೆ. ಒಂದು ಸಾರಿ ಜನರ ಲೆಕ್ಕಾಚಾರದಲ್ಲಿ ನೋಡಿದರೆ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
Advertisement
ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಆನಂದ್ ಸಿಂಗ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನಗೆ ಮಾಧ್ಯಮದ ಮುಖಾಂತರ ಅವರ ಭೇಟಿ ಬಗ್ಗೆ ಗೊತ್ತಾಗಿದೆ. ರಾಜಕೀಯ ಉದ್ದೇಶದ ಭೇಟಿಯಲ್ಲ ಎಂದು ಅವರಿಬ್ಬರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇನ್ನೂ ಬೇರೆ ಪಕ್ಷದವರು ಯಾರ್ಯಾರು ನಮ್ಮ ನಾಯಕರ ಸಂಪರ್ಕದಲ್ಲಿದ್ದಾರೆ ಎನ್ನುವುದು ನನಗೇನು ಗೊತ್ತು? ಅದನ್ನು ಅವರೇ ಮಾತನಾಡುತ್ತಾರೆ. ಸಾರ್ವಜನಿಕ ಜೀವನದಲ್ಲಿ ಯಾರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಆ ಬಗ್ಗೆ ಅವರೇ ಸ್ಪಷ್ಟೀಕರಣ ಕೊಡಬೇಕು. ಅವರ ಉದ್ದೇಶ ಏನಿದೆ ಅಂತ ನನಗೆ ಗೊತ್ತಿಲ್ಲ ಎಂದು ಮಾತನಾಡಿದರು.