ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶ (Budget Session 2025) ನಡೆಯುತ್ತಿರುವ ಹಿನ್ನೆಲೆ ಸಾಲು ಸಾಲು ಪ್ರತಿಭಟನೆಗಳನ್ನ ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿಧಾನಸೌಧದ ಸುತ್ತಮುತ್ತ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಹಕ್ಕಿ ಜ್ವರದ ಆತಂಕ – ಮಟನ್, ಫಿಶ್ ಮೊರೆಹೋದ ಚಿಕನ್ ಪ್ರಿಯರು
Advertisement
Advertisement
ಜೆಡಿಎಸ್ ಕಾರ್ಯಕರ್ತರು ಗೃಹಲಕ್ಷ್ಮಿ ಹಣ ಬಿಡುಗಡೆಗೆ ದಿನಾಂಕ ನಿಗದಿಪಡಿಸುವಂತೆ ಆಗ್ರಹಿಸಿ ಕ್ಯಾಲೆಂಡರ್ ಹಿಡಿದು ವಿಧಾನಸೌದ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಕ್ಯಾಲೆಂಡರ್ ಹಿಡಿದು ಪ್ರತಿಭಟನೆಗೆ ಅವಕಾಶ ಕೊಡದೇ ಇರೊದಕ್ಕೆ ಖಾಕಿ ಪ್ಲ್ಯಾನ್ ಮಾಡಿಕೊಂಡಿದೆ. ಇದನ್ನೂ ಓದಿ: ಇಂದಿನಿಂದ ಅಧಿವೇಶನ – ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಮೈತ್ರಿ ಸಜ್ಜು
Advertisement
Advertisement
ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಕಾರಣ ವಿಧಾನಸೌಧದ ಸುತ್ತಮುತ್ತ ಖಾಕಿ ಕಣ್ಗಾವಲು ಇಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ ಪೊಲೀಸ್ ಭದ್ರತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸರು ಹಾಗೂ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಷೇರುಪೇಟೆ ವಂಚನೆ: ಸೆಬಿ ಮಾಜಿ ಅಧ್ಯಕ್ಷೆ ಬುಚ್ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ