ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನ (Budget Session of Parliament) ಇದೇ ತಿಂಗಳ 31 ರಿಂದ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಈ ಬಾರಿ 66 ದಿನಗಳ ಸಂಸತ್ ಅಧಿವೇಶನ ನಡೆಸಲು ಕಾರ್ಯಕ್ರಮ ಹಾಕಿಕೊಂಡಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: 8 ಗಂಟೆ ವಿಳಂಬ, ಕೊನೆ ಕ್ಷಣದಲ್ಲಿ ವಿಮಾನ ರದ್ದು – ಮತ್ತೊಮ್ಮೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ ಸ್ಪೈಸ್ ಜೆಟ್
Advertisement
Advertisement
ಜನವರಿ 31ರಂದು ಆರಂಭಗೊಳ್ಳುವ ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪಗಳು ಎಪ್ರಿಲ್ 6ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಬಜೆಟ್ ಮಂಡನೆ, ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಸೇರಿದಂತೆ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಜೋಶಿ ತಿಳಿಸಿದ್ದಾರೆ.
Advertisement
Advertisement
ಅಧಿವೇಶನದ ಸಂದರ್ಭದಲ್ಲಿ, ಸಂಸತ್ತಿನ ಸ್ಥಾಯಿ ಸಮಿತಿ ಎದುರಿರುವ ಹಲವು ರಾಜ್ಯಗಳ ಅನುದಾನಗಳ ಬೇಡಿಕೆ ಕುರಿತು ನಿರ್ಣಯ ಕೈಗೊಳ್ಳಲು ಹಾಗೂ ವಿವಿಧ ಸಚಿವಾಲಯಗಳಿಗೆ ಸಂಬಂಧಪಟ್ಟ ವಿಷಯಗಳ ಕುರಿತು ವರದಿ ಸಿದ್ಧಪಡಿಸಲು ಫೆಬ್ರವರಿ 14 ರಿಂದ ಮಾರ್ಚ್ 12ರ ವರೆಗೆ ವಿರಾಮ ಪಡೆಯಲಾಗುವುದು ಎಂದು ಜೋಶಿ ಹೇಳಿದ್ದಾರೆ. ಇದನ್ನೂ ಓದಿ: ದೆಹಲಿ ಬಳಿಕ ಕರ್ನಾಟಕದಲ್ಲೂ ಆಪ್ `ಟಿಕೆಟ್ ಫಾರ್ ಸೇಲ್’ – ಸುಕೇಶ್ ಚಂದ್ರಶೇಖರ್ ಗಂಭೀರ ಆರೋಪ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k