ಗಾಂಧಿನಗರ: ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿಗೆ (Train) ಗುರುವಾರ ಜಾನುವಾರುಗಳು (Cattle) ಡಿಕ್ಕಿ ಹೊಡೆದ ಪರಿಣಾಮ ರೈಲಿಗೆ ಹಾನಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಮ್ಮೆಗಳ ಮಾಲೀಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಹೀಗಾಗಿ ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್‌ನ ರೈಲ್ವೆ ರಕ್ಷಣಾ ಪಡೆ (RPF) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಇದನ್ನೂ ಓದಿ: ಜಾನುವಾರುಗಳಿಗೆ ಡಿಕ್ಕಿ – ಕಳೆದ ವಾರ ಆರಂಭವಾಗಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮುಂಭಾಗ ಜಖಂ
Advertisement
Advertisement
ರೈಲ್ವೇ ಕಾಯಿದೆ, 1989ರ ಸೆಕ್ಷನ್ 147 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ರೈಲ್ವೆಯ ಯಾವುದೇ ಭಾಗಕ್ಕೆ ಅನಧಿಕೃತ ಪ್ರವೇಶ ಹಾಗೂ ಅದರ ಆಸ್ತಿಯನ್ನು ದುರುಪಯೋಗ ಪಡಿಸಿಕೊಳ್ಳುವುದಕ್ಕೆ ವಿಧಿಸಲಾಗುವ ಶಿಕ್ಷೆಯ ಕಾನೂನಾಗಿದೆ ಎಂದು ಆರ್‌ಪಿಎಫ್ ಇನ್ಸ್‌ಪೆಕ್ಟರ್ ಪ್ರದೀಪ್ ಶರ್ಮಾ ತಿಳಿಸಿದ್ದಾರೆ.
Advertisement
ನಾಲ್ಕು ಎಮ್ಮೆಗಳು ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಎಫ್‌ಐಆರ್ ದಾಖಲಿಸಲಾಗಿದೆ. ರೈಲ್ವೆ ಪೊಲೀಸರಿಗೆ ಇದುವರೆಗೆ ಎಮ್ಮೆಗಳ ಮಾಲೀಕರನ್ನು ಗುರುತಿಸಲು ಸಾಧ್ಯವಾಗಿಲ್ಲ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇನ್‍ಸ್ಟಾಗ್ರಾಮ್‍ನಲ್ಲಿ ಲೈಕ್, ಕಾಮೆಂಟ್ ವಿಚಾರಕ್ಕೆ ಜಗಳ – ಇಬ್ಬರ ಕೊಲೆಯಲ್ಲಿ ಅಂತ್ಯ
Advertisement
ಗುರುವಾರ ಬೆಳಗ್ಗೆ 11:15ರ ಸುಮಾರಿಗೆ ಗುಜರಾತ್‌ನ (Gujarat) ವತ್ವಾ ರೈಲು ನಿಲ್ದಾಣದ ಬಳಿ ಟ್ರ್ಯಾಕ್‌ನಲ್ಲಿ ಜಾನುವಾರುಗಳಿಗೆ ರೈಲು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಎಮ್ಮೆಗಳು ಸಾವನ್ನಪ್ಪಿವೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.