ಕೊಪ್ಪಳ: ದೇವರಿಗೆ ಹರಕೆಗೆಂದು ಬಿಟ್ಟಿರುವ ಕೋಣವೊಂದು ಬೈದು, ಹೊಡೆದ ಕಾರಣಕ್ಕಾಗಿ ವ್ಯಕ್ತಿಯೋರ್ವನಿಗೆ ಬೆಂಬಿಡದೆ ಕಾಡುತ್ತಿರುವ ವಿಚಿತ್ರ ಘಟನೆಯೊಂದು ಕೊಪ್ಪಳ ತಾಲೂಕಿನ ಹಳೇ ಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯಲ್ಲಿರುವ ಪ್ರಸಿದ್ಧ ದೇವರಾದ ಶ್ರೀಕಂಟೆಮ್ಮ ದುರ್ಗಾ ದೇವಿಯ ಹರಕೆಗೆಂದು ಕೋಣವನ್ನು ಬಿಡಲಾಗಿತ್ತು. ಈ ಕೋಣ ಗ್ರಾಮದಲ್ಲಿ ಮೇವು ತಿನ್ನುತ್ತಿದ್ದ ವೇಳೆ ರೋಷನ್ ಎಂಬಾತ ಬೈದು ಓಡಿಸಿದ್ದಾನೆ. ಆ ಬಳಿಕ ಕೋಣ ಎಲ್ಲೆಂದರಲ್ಲಿ ರೋಷನ್ ಕಂಡೊಡನೆ ತಿವಿಯಲು ಅಟ್ಟಾಡಿಸಿಕೊಂಡು ಹೋಗುತ್ತಿದೆ. ಇದನ್ನೂ ಓದಿ: ದೇವರಿಗಾಗಿ ದೇವರಿಂದ್ಲೇ ಹುಡುಕಾಟ- ಹುತ್ತದಲ್ಲಿ ಸಿಕ್ಕೇ ಬಿಡ್ತು 200 ವರ್ಷದ ಹಿಂದಿನ ವಿಗ್ರಹ
ದಾರಿಯಲ್ಲಿ ಸಿಕ್ಕರೆ ಅಟ್ಟಾಡಿಸಿಕೊಂಡು ಮನೆಯ ಮುಂದೆ ರೋಷನ್ ಹೊರಬರುವುದನ್ನೇ ಕಾಯುತ್ತಿರುವ ಕೋಣ ಕಳೆದ ಕೆಲ ದಿನಗಳಿಂದ ಕಾಟ ಕೊಡುತ್ತಿದೆ. ಇದರಿಂದ ರೋಷನ್ ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತ ದೇವಿಗೆ ಹರಕೆಯಾಗಿ ಬಿಟ್ಟಿರುವ ಕೋಣ ಇದಾಗಿರುವುದರಿಂದ ಇದು ದೇವಿಯ ಪವಾಡ ಹಾಗಾಗಿ ಈ ರೀತಿ ತೊಂದರೆ ಕೊಡುತ್ತಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ. ರೋಷನ್ ಜೊತೆ ಕೋಣದೊಂದಿಗೆ ತಪ್ಪಾಯಿತು ಎಂದು ಬೇಡಿಕೊಳ್ಳಲು ಗ್ರಾಮಸ್ಥರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲಿ ಇಲಿಗಳ ಕಾಟ – ಬೆಕ್ಕು ಸಾಕಿದ ಪೊಲೀಸರು
Live Tv