ನೋಡನೋಡುತ್ತಲೇ ಕುಸಿದೇ ಬಿಡ್ತು ಬೆಂಕಿ ಹೊತ್ತಿಕೊಂಡಿದ್ದ ಕಟ್ಟಡ

Public TV
1 Min Read
delhi building collaps

ನವದೆಹಲಿ: ಬೆಂಕಿ (Fire) ಹೊತ್ತಿಕೊಂಡಿದ್ದ 3 ಅಂತಸ್ತಿನ ಕಟ್ಟಡವೊಂದು (Building) ನೋಡನೋಡುತ್ತಲೇ ಕುಸಿದು ಬಿದ್ದಿದ್ದು (Building Collapse), ಬೆಂಕಿ ನಂದಿಸಲು ಸ್ಥಳಕ್ಕೆ ಆಗಮಿಸಿದ್ದ ನೂರಾರು ಅಗ್ನಿಶಾಮಕ ಸಿಬ್ಬಂದಿ (firefighters) ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಉತ್ತರ ದೆಹಲಿಯ (Delhi) ರೋಶನಾರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಂಕಿ ತಗುಲಿದ್ದ 3 ಅಂತಸ್ತಿನ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಕಟ್ಟಡ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಸಿಬ್ಬಂದಿಗೂ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಕಟ್ಟಡಕ್ಕೆ ಬೆಂಕಿ ಬುಧವಾರ ಬೆಳಗ್ಗೆ 11:30ರ ವೇಳೆಗೆ ಹೊತ್ತಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ 18 ಟ್ರಕ್‌ಗಳನ್ನು ಕಳುಹಿಸಿತ್ತು. ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾಗ ಕಟ್ಟಡ ಕುಸಿದಿದೆ. ಕೇವಲ 5 ಸೆಕೆಂಡುಗಳಲ್ಲಿ ಕಟ್ಟಡ ಸಂಪೂರ್ಣವಾಗಿ ನೆಲಸಮವಾಗಿದೆ. ಇದನ್ನೂ ಓದಿ: ಹಾಡಹಗಲೇ ಕೊಲೆ – ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಆಪ್ತನ ಮನೆ ನೆಲಸಮ

ಕಟ್ಟಡಕ್ಕೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದಿನಕ್ಕೆ 5 ಬಾರಿ ನಮಾಜ್, 2 ಸಸಿ ನೆಡಬೇಕು – ಅಪರಾಧಿಗೆ ವಿಭಿನ್ನ ಶಿಕ್ಷೆ ನೀಡಿದ ಕೋರ್ಟ್

Share This Article
Leave a Comment

Leave a Reply

Your email address will not be published. Required fields are marked *