ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಆರ್ ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಕೇಶ್ ಹಾಗೂ ರಾಹುಲ್ ಮೃತ ದುರ್ದೈವಿಗಳು. ರಾಕೇಶ್ ಹಾಗೂ ರಾಹುಲ್ ಮೂಲತಃ ಬಿಹಾರ ಮೂಲದವರು. ಇಂದು ಮುಂಜಾನೆ 4.30ರ ಸುಮಾರಿಗೆ ಕಟ್ಟಡ ಕುಸಿದಿದೆ.
ಘಟನೆಯಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಎಪಿಎಂಸಿಯಿಂದ ವಾಹನ ನಿಲುಗಡೆಗೆ ಕಟ್ಟಡ ನಿರ್ಮಾಣವಾಗುತ್ತಿದ್ದು, ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಿತ್ತು.
ಈ ಬಗ್ಗೆ ಆರ್ ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.