ಬಳ್ಳಾರಿ: ಕಟ್ಟಡ ಕಾರ್ಮಿಕ ಸಂಘಗಳ ಹೋರಾಟ ಮತ್ತು ಕಲ್ಯಾಣ ಮಂಡಳಿ ಅಧಿಕಾರಿಗಳ ನಿರಂತರ ಪ್ರಯತ್ನದ ಫಲವಾಗಿ ಇದೀಗ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳನ್ನು ಕಾರ್ಮಿಕರು ಪಡೆದಿದ್ದಾರೆ. ಆದರೆ ಕಾರ್ಮಿಕರು ಕೇವಲ ಸೌಲಭ್ಯಗಳಿಗಾಗಿ ಮಾತ್ರ ಸಂಘಟಿತರಾಗದೇ ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ತಮ್ಮ ಕುಟುಂಬದ ಸಾಮಾಜಿಕ ಭದ್ರತೆಗಾಗಿ ತಮ್ಮ ವಾಸ ಪ್ರದೇಶದಲ್ಲಿ ಕಟ್ಟಡ ಕಾರ್ಮಿಕರ ಸಂಘಗಳನ್ನು ರಚಿಸಿಕೊಳ್ಳಬೇಕು ಎಂದು CWFI ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಆಗ್ರಹಿಸಿದ್ದಾರೆ.
ಇಂದು ಹೊಸಪೇಟೆ ತಾಲೂಕಿನ ಕಟ್ಟಡ ಕಾರ್ಮಿಕರ 6 ನೇ ಸಮ್ಮೇಳನ ಅಂಬೇಡ್ಕರ್ ಭವನದ ಗೌತಮ ಬುದ್ಧ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಕೆ.ಮಹಾಂತೇಶ್, ಕೊರೊನಾ ಸಂದರ್ಭದಲ್ಲಿ ಲಕ್ಷಾಂತರ ಕಟ್ಟಡ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದಾಗ ಅವರ ನೆರವಿಗೆ ಕಾರ್ಮಿಕ ಸಂಘ ಜೊತೆ ಕಾರ್ಮಿಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಗಲು ರಾತ್ರಿಗಳೆನ್ನದೆ ಶ್ರಮಿಸಿದ್ದಾರೆ ಇದರಿಂದಾಗಿ ಸಾವಿರಾರು ಕಾರ್ಮಿಕರು ಹಸಿವಿನ ದವಡೆಯಿಂದ ಪಾರಾಗಿದ್ದಾರೆ. ಇದು ಅಭಿನಂದನಾರ್ಹ ಕೆಲಸ ಆದರೆ ಕೊರೊನಾ ಅಲೆಗಳಲ್ಲಿ ನಿರುದ್ಯೋಗಿಗಳಾಗಿರುವ ಲಕ್ಷಾಂತರ ಕಾರ್ಮಿಕರಿಗೆ ಸರ್ಕಾರ ಉದ್ಯೋಗ ಭದ್ರತೆ ಮತ್ತು ಸೌಲಭ್ಯಗಳ ಅಸಮರ್ಪಕ ಸಿಗದೇ ಇರುವ ಕಾರಣದಿಂದಾಗಿ ಕಾರ್ಮಿಕರಲ್ಲಿ ಅಸಮಧಾನಕ್ಕೆ ಕಾರಣವಾಗಿದೆ ಎಂದು ನುಡಿದರು. ಇದನ್ನೂ ಓದಿ: ಹಣದ ವಿಚಾರಕ್ಕೆ ಜೋಡಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು ಅರೆಸ್ಟ್!
Advertisement
ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಅಲ್ತಫಾ ಹಾಗೂ ಮಾರಿಕಾಂಬಾ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಮತ್ತು ಹೊಸಪೇಟೆ ಭಾಗದಲ್ಲಿ ಇಲಾಖೆವತಿಯಿಂದ ಸಾವಿರಾರು ರೇಷನ್‍ಕಿಟ್‍ಗಳನ್ನು ಇತರೆ ಸಾಮಾಗ್ರಿಗಳನ್ನು ವಿತರಿಸಲಾಗಿದೆ ಜೊತೆಗೆ ಲಕ್ಷಾಂತರ ರೂಪಾಯಿ ಪರಿಹಾರವನ್ನು ಕೊಡಿಸಲು ಶ್ರಮಿಸಲಾಗಿದೆ ಆದರೆ ತಾಂತ್ರಿಕ ಕಾರಣದಿಂದಾಗಿ ಇನ್ನೂ ನೂರಾರು ಅರ್ಜಿಗಳ ವಿಲೆವಾರಿಯಾಗಿಲ್ಲ ಇದನ್ನು ಇತ್ಯರ್ಥಪಡಿಸಿ ಪರಿಹಾರ ಒದಗಿಸಲಾಗುವುದು ಎನ್ನುವ ಭರವಸೆ ನೀಡಿದರು.
Advertisement
Advertisement
ಕಾರ್ಮಿಕ ನಿರೀಕ್ಷಕರಾದ ಭೂಪಾಲ್ ಹಾಗೂ ಅಶೋಕ್, ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಭಾಸ್ಕರ ರೆಡ್ಡಿ, ತಾಲೂಕು ಅಧ್ಯಕ್ಷರಾದ ನಾಗರತ್ನಮ್ಮ, ಕೂಡ್ಲಿಗಿ ತಾಲೂಕು ಸಿಐಟಿಯು ಮುಖಂಡರು ವಕೀಲರಾದ ವಿರುಪಾಕ್ಷ, ಮತ್ತು ರಾಘವೇಂದ್ರ, ಜಿಲ್ಲಾ ಅಧ್ಯಕ್ಷರಾದ ಯಲ್ಲಾಲಿಂಗ, ತಾಲೂಕು ಅಧ್ಯಕ್ಷರಾದ ಗೋಪಾಲ, ಕಾರ್ಯದರ್ಶಿ ರಾಮಾಂಜಿ ಹಾಗೂ ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷ ವಿ. ಸ್ವಾಮಿ, ವಿಮಾ ಪ್ರತಿನಿಧಿಗಳ ದಕ್ಷಿಣ ವಲಯ ಅಧ್ಯಕ್ಷ ಎಲ್.ಮಂಜುನಾಥ್, ಹಾಗೂ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಮಹಿಳಾ ಮುಖಂಡರಾದ ಭೀಯಮ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಜನಧನ್ ಖಾತೆಗಳಿಂದ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದೆ: ಎಚ್‍ಡಿಕೆ
Advertisement