ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿ ಸರ್ಕಾರದ ಸುತ್ತೋಲೆಯನ್ನು ಎತ್ತಿ ಹಿಡಿದಿದೆ.
ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಕಟ್ಟಡ ರಹಿತ ವಲಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು 1999 ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಈ ಬಗ್ಗೆ ಆದೇಶಿಸಿತ್ತು. ಇದನ್ನೂ ಓದಿ: ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ
Advertisement
Advertisement
ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಉಡುಪಿಯ ಕಾಪು ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಟ್ಟಡವನ್ನು ನಿರ್ಮಿಸಲಾಗಿತ್ತು. ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಹೈಕೋರ್ಟ್ ಈ ಆದೇಶವನ್ನು ಪ್ರಕಟಿಸಿದೆ.
Advertisement
60 ದಿನಗಳಲ್ಲಿ ಅತಿಕ್ರಮಿತ ಕಟ್ಟಡವನ್ನು ತೆರವುಗೊಳಿಸಬೇಕೆಂದು 4 ಮಂದಿ ಪ್ರತಿವಾದಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ ಬಗ್ಗೆಯೂ 15 ದಿನಗಳಲ್ಲಿ ಸತ್ಯ ಶೋಧನೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಸಲ್ಮಾನ್ ಖಾನ್ ತಡೆದ ಅಧಿಕಾರಿಗೆ ಇನಾಮು