ಮಂಗಳೂರು: ಕೇಂದ್ರ ಸರ್ಕಾರ ನಿಷೇಧಿಸಿರುವ ಬುಲ್‍ಟ್ರಾಲ್ ಮೀನುಗಾರಿಕೆ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಮತ್ತೆ ಕಾಣಿಸಿಕೊಂಡಿದೆ.
ಬಿಸ್ಮಿಲ್ಲಾ ಹೆಸರಿನ ಎರಡು ಮೀನುಗಾರಿಕಾ ದೋಣಿಗಳು ಅರಬ್ಬಿ ಸಮುದ್ರದ ಮಧ್ಯದಲ್ಲಿ ಕಾನೂನು ಬಾಹಿರವಾಗಿ ಬುಲ್ ಟ್ರಾಲ್ ಮೀನುಗಾರಿಕೆ ನಡೆಸುತ್ತಿದ್ದಾಗ ಸ್ಥಳೀಯ ಮೀನುಗಾರರು ಆಕ್ಷೇಪಿಸಿದ್ದಾರೆ. ಅಲ್ಲದೆ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಗಳ ವಿಡಿಯೋವನ್ನು ತಮ್ಮ ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ.
Advertisement
Advertisement
ಎರಡು ಪರ್ಸೀನ್ ಬೋಟ್ ಮೂಲಕ ಬೃಹತ್ ಬಲೆಗಳನ್ನು ಹಾಕಿ ಮೀನು ಶಿಕಾರಿ ಮಾಡಲಾಗುತ್ತೆ. ಈ ರೀತಿಯ ಬುಲ್ ಟ್ರಾಲ್ ಮೀನುಗಾರಿಕೆಯಿಂದ ಮೀನಿನ ಸಂತತಿ ನಾಶವಾಗಿ ಮತ್ಸ್ಯಕ್ಷಾಮ ತಲೆದೂರುವ ಆತಂಕದಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರ ಈ ಮಾದರಿ ಮೀನುಗಾರಿಕೆಗೆ ನಿಷೇಧ ವಿಧಿಸಿತ್ತು. ಕಳೆದ ವರ್ಷದ ನವಂಬರಿನಲ್ಲಿ ಈ ರೀತಿಯ ಮೀನುಗಾಕೆಗೆ ನಿಷೇಧ ಹೇರಲಾಗಿತ್ತು. ಆದರೆ ಮಂಗಳೂರಿನ ಮೀನುಗಾರರೇ ಈ ರೀತಿಯ ಮೀನುಗಾರಿಕೆ ನಡೆಸುತ್ತಿದ್ದು, ಇತರೇ ಪರ್ಸೀನ್ ಬೋಟ್ ಮೀನುಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಇದೀಗ ಇಂತಹ ಮೀನುಗಾರಿಕೆ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ರಾತ್ರಿ ಹೊತ್ತಿನಲ್ಲಿ ಮಾಡುವ ಲೈಟ್ ಫಿಶಿಂಗ್ ಮತ್ತು ಬುಲ್ ಟ್ರಾಲ್ ಮೀನುಗಾರಿಕೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv