LatestMain PostNational

ಅಕ್ರಮ ಆಸ್ತಿ ಪತ್ತೆಯಾದರೆ ಬುಲ್ಡೋಜರ್ ನುಗ್ಗಿಸಿ – ಅಧಿಕಾರಿಗಳಿಗೆ ಮಮತಾ ಬ್ಯಾನರ್ಜಿ ಸವಾಲು

ಕೋಲ್ಕತ್ತಾ: ಅಕ್ರಮ ಆಸ್ತಿ ಸಂಬಂಧಿಸಿದಂತೆ ಕೇಂದ್ರ ತನಿಖಾ ತಂಡದಿಂದ (ED) ನನಗೆ ಅಥವಾ ನನ್ನ ಕುಟುಂಬ ಸದಸ್ಯರಿಗೆ ನೋಟಿಸ್ ನೀಡಿದರೆ, ನಾನು ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ. ನಮ್ಮ ಬಳಿ ಅಕ್ರಮ ಆಸ್ತಿ ಪತ್ತೆಯಾದರೆ ಬುಲ್ಡೋಜರ್ ನುಗ್ಗಿಸಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಿ ಅಧಿಕಾರಿಗಳಿಗೆ ಸವಾಲು ಹಾಕಿದ್ದಾರೆ.

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ತಂಡ ಮಮತಾ ಬ್ಯಾನರ್ಜಿಯ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಸಮನ್ಸ್ ನೀಡಿತ್ತು. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಅಕ್ರಮ ಆಸ್ತಿ ಸಂಬಂಧ ಸಮನ್ಸ್ ನೀಡಿರುವುದು ನನ್ನ ಗಮನಕ್ಕೆ ಬಂದಿದೆ. ನಾವು ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ. ನನ್ನ ಕುಟುಂಬ ಸದಸ್ಯರೊಂದಿಗೆ ನಾನು ನಿಲ್ಲುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ನಿತೀಶ್‌ ಭೇಟಿ ಬೆನ್ನಲ್ಲೇ ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡಿದ ಕೆಸಿಆರ್‌

ಸರ್ಕಾರಿ ಆಸ್ತಿಯನ್ನು ಕಬಳಿಸಿದ್ದರೆ, ಅಂತಹ ಆಸ್ತಿಗೆ ಬುಲ್ಡೋಜರ್ ನುಗ್ಗಿಸಲಿ, ನಾನು ಯಾವುದೇ ಅಕ್ರಮ ಆಸ್ತಿ ಮಾಡಿಲ್ಲ. ನಾನು ಸಮಾಜ ಸೇವೆಗಾಗಿ ರಾಜಕಾರಣಕ್ಕೆ ಬಂದಿದ್ದೇನೆ. ಈ ಹಿಂದೆ ಇಂತಹ ರಾಜಕಾರಣ ನೋಡಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈಗಾಗಲೇ ಕೇಂದ್ರ ತನಿಖಾ ತಂಡ ನೀಡಿರುವ ಸಮನ್ಸ್ ಕುರಿತಾಗಿ ಕೋಲ್ಕತ್ತಾ ಹೈಕೋರ್ಟ್‍ನಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ. ಇದನ್ನೂ ಓದಿ: AAP ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ದೆಹಲಿ ಲೆಫ್ಟಿನೆಂಟ್ ಗವರ್ನರ್

Live Tv

Leave a Reply

Your email address will not be published.

Back to top button