ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕ್ಷೇತ್ರ ಕಾಫಿನಾಡಿನಲ್ಲೂ ಬುಲ್ಡೋಜರ್ ಸದ್ದು ಕೇಳುತ್ತಿದ್ದು, ಉತ್ತರ ಪ್ರದೇಶ ಮಾದರಿಯಲ್ಲೇ ಅಕ್ರಮ ಗೋಮಾಂಸ ಅಡ್ಡೆಗಳ ಮೇಲೆ ಪ್ರಯೋಗ ನಡೆಯುತ್ತಿದೆ.
ಈಗಾಗಲೇ ನಗರಸಭೆ ಅಕ್ರಮ ಗೋಮಾಂಸ ಮಾರಾಟ ಮಾಡುವ ಮನೆಗಳಿಗೆ ನೋಟಿಸ್ ನೀಡಿದ್ದು, ನಿರ್ದಾಕ್ಷಣ್ಯ ಕ್ರಮದ ಎಚ್ಚರಿಕೆ ನೀಡಿ ನೋಟಿಸ್ ಅಂಟಿಸಿದೆ. ಸ್ಫೋಟಕ, ಮಾದಕ ವಸ್ತು ಸೇರಿದಂತೆ ಗೋಹತ್ಯೆ ಮಾಡಿದರೂ ಕಟ್ಟಡ ನೆಲಸಮ ಮಾಡುವುದಾಗಿ ತಿಳಿಸಿದೆ. ಈಗಾಗಲೇ 10ಕ್ಕೂ ಹೆಚ್ಚು ಮನೆ, ಗೋಮಾಂಸ ಅಡ್ಡೆಗಳಿಗೆ ನಗರಸಭೆ ಸಿಬ್ಬಂದಿ ನೋಟಿಸ್ ಅಂಟಿಸಿದ್ದಾರೆ.
Advertisement
Advertisement
ಕಳೆದ ವಾರ ನಗರಸಭೆ ಎಂದಿನಂತೆ ತಮಿಳು ಕಾಲೋನಿ ಹಾಗೂ ಷರೀಫ್ ಗಲ್ಲಿಯಲ್ಲಿ ಅಲ್ಲಲ್ಲಿ ಬೆಳೆದಿದ್ದ ಗಿಡ-ಘಂಟೆಗಳ ತೆರವಿಗೆ ಮುಂದಾಗಿತ್ತು. ಆಗ ತಮಿಳು ಕಾಲೋನಿಯ ಜನನಿಬಿಡ ಪ್ರದೇಶದಲ್ಲಿದ್ದ ಅಕ್ರಮ ಗೋಮಾಂಸ ಶೆಡ್ ಕಣ್ಣಿಗೆ ಬಿದ್ದಿದೆ. ಅಧಿಕಾರಿಗಳು ಸ್ಥಳಕ್ಕೆ ಹೋದಾಗ ಗೋಮಾಂಸವೂ ಅಲ್ಲಿ ಇತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಅಶ್ವಥ್ ನಾರಾಯಣ ಒಬ್ಬ ಕಚಡ, ಮಾರ್ಕ್ಸ್‌ಕಾರ್ಡ್ ಮಾರ್ಕೊಂಡು ಬದುಕಿದವನು: ಡಿ.ಕೆ.ಸುರೇಶ್ ವಾಗ್ದಾಳಿ
Advertisement
Advertisement
ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ನಗರಸಭೆ ಆಯುಕ್ತ ಬಸವರಾಜ್ ನಗರ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಗೋಮಾಂಸ ಮಳಿಗೆಯನ್ನು ಜೆಸಿಬಿಯಿಂದ ಧ್ವಂಸ ಮಾಡಿದ್ದರು. ಇದನ್ನೂ ಓದಿ: ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ