– ರಾಜಸ್ಥಾನದಲ್ಲಿ ಬುಲ್ಡೋಜರ್‌ಗಳಿಂದ ಆರೋಪಿಗಳ ಹೋಟೆಲ್ ಕೆಡವಿದ ಪೊಲೀಸರು
ಜೈಪುರ: 13 ವರ್ಷದ ಬಾಲಕಿ ಮೇಲೆ 30 ಪುರುಷರು ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ರಾಜಸ್ಥಾನದ (Rajasthan) ನಾಲ್ಕು ಹೋಟೆಲ್‌ಗಳನ್ನು ಪೊಲೀಸರು ನೆಲಸಮಗೊಳಿಸಿದ್ದಾರೆ.
ಗ್ಯಾಂಗ್‌ರೇಪ್ ಕೇಸಲ್ಲಿ ಹೋಟೆಲ್ ಮಾಲೀಕರ ವಿರುದ್ಧ ಗಂಭೀರ ಆರೋಪ ಕೇಳಿಬಂದಿತ್ತು. ಜಿಲ್ಲಾಡಳಿತ ಮತ್ತು ಪೊಲೀಸರು ಈ ಕ್ರಮ ಕೈಗೊಂಡಿದ್ದು, ಅಪರಾಧಕ್ಕೆ ಸಂಬಂಧಿಸಿದ ಹೋಟೆಲ್‌ಗಳನ್ನೇ ನೆಲಸಮಗೊಳಿಸಲು ಬುಲ್ಡೋಜರ್‌ಗಳನ್ನು ನಿಯೋಜಿಸಲಾಗಿದೆ. ಆರೋಪಿಗಳು ಕಠಿಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿಶಂಕರ್ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
ಪ್ರಕರಣ ಏನು?
ಜೂನ್ 18 ರಂದು ಬಾಲಕಿ ಮನೆಯಿಂದ ಕಾಣೆಯಾಗಿದ್ದಳು. ಅವಳನ್ನು ರಿಕ್ಷಾ ಚಾಲಕನೊಬ್ಬ ಹೋಟೆಲ್ ಮಾಲೀಕರಿಗೆ ಮಾರಾಟ ಮಾಡಿದ್ದ. ನಂತರ ಐದು ದಿನಗಳ ಕಾಲ ನಗರದಾದ್ಯಂತ ಹಲವಾರು ಹೋಟೆಲ್‌ಗಳಲ್ಲಿ 30 ಕ್ಕೂ ಹೆಚ್ಚು ಪುರುಷರು ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಹಲವಾರು ಹೋಟೆಲ್ ಮಾಲೀಕರು ಮತ್ತು ನಿರ್ವಾಹಕರು ಅಪ್ರಾಪ್ತ ಬಾಲಕಿ ಮೇಲಿನ ದೌರ್ಜನ್ಯದಲ್ಲಿ ಭಾಗಿಯಾಗಿದ್ದರು. ಆಕೆಯ ಮೇಲೆ ಪದೇ ಪದೇ ಹಲ್ಲೆ ನಡೆಸಿದ್ದರು. ಮದ್ಯ ಕುಡಿಸಿ ದೌರ್ಜನ್ಯ ಎಸಗಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಪ್ರೀತಿಗಾಗಿ ಗಡಿ ದಾಟಿ ಬಂದವ ಅರೆಸ್ಟ್; ಪಾಕಿಸ್ತಾನಕ್ಕೆ ವಾಪಸ್ ಕಳಿಸಿದ ಭಾರತ
ಪೊಲೀಸರು ಇದುವರೆಗೆ 12 ಆರೋಪಿಗಳನ್ನು ಬಂಧಿಸಿದ್ದು, ಉಳಿದ ಶಂಕಿತರನ್ನು ಬಂಧಿಸಲು ತನಿಖೆ ಮುಂದುವರಿದಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಕ್ರಮ ಹೋಟೆಲ್‌ಗಳನ್ನು ಕೆಡವಿ, ಅದಕ್ಕೆ ಕಾರಣರಾದವರಿಗೆ ಮರಣದಂಡನೆ ವಿಧಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ. ಆಡಳಿತವು ಅಪರಾಧವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಮತ್ತು ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಕೂಡ ಪ್ರತಿಭಟನೆಗಳನ್ನು ನಡೆಸಿದೆ.
