ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

Public TV
2 Min Read
Haryana 1

ಚಂಡೀಗಢ: ಕೋಮು ಸಂಘರ್ಷಕ್ಕೆ ಹರಿಯಾಣದಲ್ಲಿ (Haryana) ತತ್ತರಿಸಿದೆ. ನಿನ್ನೆಯಿಂದ ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಹೊತ್ತಿ ಉರಿಯುತ್ತಿವೆ. ಕರ್ಫ್ಯೂ ಲೆಕ್ಕಿಸದೇ ಉಭಯ ಕೋಮುಗಳು ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಆಸ್ತಿ-ಪಾಸ್ತಿಗಳನ್ನೂ ಹಾನಿ ಮಾಡಿದ್ದಾರೆ.

ಇನ್ನೂ ಹರಿಯಾಣದಲ್ಲಿ ನಡೆದ ಕೋಮುಗಲಭೆ ಪ್ರಕರಣದ ಆರೋಪಿಗಳಿಗೆ ಅಲ್ಲಿನ ಸರ್ಕಾರ ಕೂಡ ಬುಲ್ಡೋಜರ್ (Bulldozer) ಶಾಕ್ ನೀಡಿದೆ. ಹಿಂಸಾಚಾರಪೀಡಿತ ನೂಹ್‌ನಿಂದ ಸುಮಾರು 20 ಕಿಮೀ ದೂರದಲ್ಲಿರುವ ತೌರುದಲ್ಲಿ ವಾಸಿಸುತ್ತಿರುವ ವಲಸಿಗರ ಗುಡಿಸಲುಗಳನ್ನ ಬುಲ್ಡೋಜರ್ ಬಳಸಿ ಹರಿಯಾಣ ಸರ್ಕಾರ (Haryana Government) ಗುರುವಾರ ನೆಲಸಮಗೊಳಿಸಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಬಿಜೆಪಿ ಭರ್ಜರಿ ತಯಾರಿ – ಶನಿವಾರ `ಕೈ’ನಾಯಕರ ಹೈವೋಲ್ಟೇಜ್ ಮೀಟಿಂಗ್

Haryana 2 1

ಸರ್ಕಾರಿ ಜಮೀನನ್ನು ಅತಿಕ್ರಮಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ಆದೇಶದಂತೆ ಗಲಭೆಕೋರರು ವಾಸವಿರುವ ಮನೆಗಳನ್ನ ತೆರವುಗೊಳಿಸಲಾಗಿದೆ. ಬಾಂಗ್ಲಾದೇಶದಿಂದ ಬಂದ ಅಕ್ರಮವಾಗಿ ಮೊದಲು ಅಸ್ಸಾಂನಲ್ಲಿ ವಾಸವಿದ್ದರು. ಅವರೀಗ ನೂಹ್ ಜಿಲ್ಲೆಯ ತೌರು ಪಟ್ಟಣದ ಮಹಮ್ಮದಪುರ ರಸ್ತೆಯ ವಾರ್ಡ್ ನಂ.1 ಹರಿಯಾಣ ನಗರ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದನ್ನೂ ಓದಿ: ಫಾರಿನ್‍ನಿಂದ ಬಂದ ಹೆಚ್‍ಡಿಕೆಯಿಂದ ಮಿಡ್‍ನೈಟ್ ಬಾಂಬ್?: ಮೆಸ್‍ನಲ್ಲಿ ನಡೆದ ಸಭೆಯಲ್ಲಿ YST!

ಸುಮಾರು ಒಂದು ಎಕರೆ ಜಮೀನಿನಲ್ಲಿ 250ಕ್ಕೂ ಅಧಿಕ ಗುಡಿಸಲುಗಳನ್ನ ನಿರ್ಮಿಸಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಅವರು ಇದೇ ಜಾಗದಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಗುಡಿಸಲುಗಳನ್ನ ನೆಲಸಮಗೊಳಿಸಲಾಗಿದೆ.

ಇನ್ನೂ ಗುರುಗ್ರಾಮದಲ್ಲಿ ಇವತ್ತೂ ಕೂಡ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಾ ರೆಸ್ಟೋರೆಂಟ್, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿ ನಡೆದ ಘರ್ಷಣೆಯಲ್ಲಿ ಐವರು ಬಲಿ ಆಗಿದ್ದಾರೆ. ನಿನ್ನೆ ಮೆವಾತ್‌ನಲ್ಲಿ ವಿಹೆಚ್‌ಪಿ- ಬಜರಂಗದಳದ ಶೋಭಾಯಾತ್ರೆ ವೇಳೆ ನಡೆದ ಮತ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್ಗಳು ಸಾವನ್ನಪ್ಪಿದ್ರು. ರಾತ್ರಿ ಮತ್ತೆ ನಡೆದ ಘರ್ಷಣೆಯಲ್ಲಿ ಇನ್ನಿಬ್ಬರು ಬಲಿಯಾಗಿದ್ದಾರೆ.

ಇನ್ನೂ ಹರಿಯಾಣದಲ್ಲಿ ಈವರೆಗೆ ಒಟ್ಟು 41 ಕೇಸ್‌ಗಳು ದಾಖಲಾಗಿದ್ದು, 176 ಮಂದಿಯನ್ನ ಬಂಧಿಸಲಾಗಿದೆ. 90 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಹಿಂಸಾಚಾರ ಸಂಬಂಧ ಪರಸ್ಪರ ಕೆಸರೆರಚಾಟಗಳು ನಡೆಯುತ್ತಿದೆ.

Web Stories

Share This Article