ಭೋಪಾಲ್: ಕೆಲ ದಿನಗಳ ಹಿಂದೆಯಷ್ಟೇ ಮೆಟ್ಟಿಲುಬಾವಿ ಕುಸಿದು 36 ಜನರ ಸಾವಿಗೆ ಕಾರಣವಾಗಿದ್ದ ಬಲೇಶ್ವರ್ ಮಹಾದೇವ್ ದೇವಸ್ಥಾನ (Beleshwar Mahadev Temple) ನೆಲಸಮಕ್ಕೆ ಬುಲ್ಡೋಜರ್ (Bulldozer) ಮುಂದಾಗಿವೆ.
ಅಕ್ರಮ ಕಟ್ಟಡ ಕಾಮಗಾರಿ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ (Madhya Pradesh) ದೇವಸ್ಥಾನವನ್ನು 5 ಬುಲ್ಡೋಜರ್‌ಗಳು ನೆಲಸಮಗೊಳಿಸುವ ಕಾರ್ಯಾಚರಣೆ ನಡೆಸುತ್ತಿವೆ. ಸೋಮವಾರ ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳ ದೊಡ್ಡ ದಂಡು ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಂಡಿದೆ. ಇದನ್ನೂ ಓದಿ: ಇಂದೋರ್ ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ
Advertisement
Advertisement
ಯಾವುದೇ ಸಂಭಾವ್ಯ ಪ್ರತಿರೋಧವನ್ನು ತಡೆಗಟ್ಟಲು ನಾಲ್ಕು ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಘಟನಾ ಸ್ಥಳದಲ್ಲಿ ಉಪ ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇದ್ದಾರೆ.
Advertisement
ಕುಸಿದ ದೇವಾಲಯದ ಪ್ರದೇಶವು ಅಕ್ರಮ ರಚನೆಯಾಗಿದ್ದು, ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಕಳೆದ ವರ್ಷ ನೆಲಸಮ ಮಾಡಲು ಮೆಟ್ಟಿಲುಬಾವಿಯ ಹೊದಿಕೆಯನ್ನು ಗುರುತಿಸಿತ್ತು. ಆದರೆ ದೇವಾಲಯದ ಟ್ರಸ್ಟ್, ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಎಚ್ಚರಿಸಿದ ನಂತರ ನೆಲಸಮ ಕಾರ್ಯದಿಂದ ಹಿಂದೆ ಸರಿದರು. ಇದನ್ನೂ ಓದಿ: ರಾಮನವಮಿ ಆಚರಣೆ ವೇಳೆ ದೇವಾಲಯದ ನೆಲ ಕುಸಿತ – 13 ಮಂದಿ ಸಾವು
Advertisement
ರಾಮನವಮಿಯಂದು ಜನಸಂದಣಿಯ ಭಾರದಿಂದ ಮೆಟ್ಟಿಲುಬಾವಿಯ ಮೇಲ್ಛಾವಣಿ ಒಡೆದು ಹೋಗಿತ್ತು. ಖಾಸಗಿ ಟ್ರಸ್ಟ್‌ನಿಂದ ನಿರ್ವಹಿಸಲ್ಪಡುವ ಈ ದೇವಾಲಯವು ಇಂದೋರ್‌ನ ಅತ್ಯಂತ ಹಳೆಯ ವಸತಿ ಕಾಲೋನಿಗಳಲ್ಲಿ ಒಂದಾದ ಸ್ನೇಹ್ ನಗರದಲ್ಲಿದೆ.
ದೇವಸ್ಥಾನದ ಟ್ರಸ್ಟ್‌ನ ಇಬ್ಬರು ಅಧಿಕಾರಿಗಳ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಅಕ್ರಮ ಕಟ್ಟಡ ತೆರವು ಕಾರ್ಯ ಮಾಡದೇ ಇದ್ದಿದ್ದ ನಗರಸಭೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದರು.