ಲಕ್ನೋ: ರಾಜ್ಯವನ್ನು ಬುಲ್ಡೋಜರ್ ಬಾಬಾ ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶ ಅರಾಜಕತೆ ಮತ್ತು ಜಂಗಲ್ ರಾಜ್ ಹಿಡಿತದಲ್ಲಿದೆ. ಕಳೆದ ಐದು ವರ್ಷಗಳಿಂದ ಇದೇ ಪರಿಸ್ಥಿತಿ ಇದೆ. ಬುಲ್ಡೋಜರ್ ಸ್ಟೀರಿಂಗ್ ಮೇಲೆ ಕೈಯಿಟ್ಟು, ಮುಖ್ಯಮಂತ್ರಿ ಪ್ರತಿಪಕ್ಷಗಳನ್ನು ಬೆನ್ನಟ್ಟುತ್ತಿದ್ದಾರೆ. ಆದರೆ ಅಧಿಕಾರದಿಂದ ರಕ್ಷಿಸಲ್ಪಟ್ಟ ಕ್ರಿಮಿನಲ್‍ಗಳು ಹೊರಗೆ ವಿಧ್ವಂಸಕರಾಗುತ್ತಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್
ಬಿಜೆಪಿಯನ್ನರು ಸುಳ್ಳು ಹೇಳುವುದರಲ್ಲಿ ನಿಪುಣರಾಗಿದ್ದು, ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಮತ್ತು ಮೋಸದ ಮೂಲಕ ಗೆದ್ದಿದ್ದಾರೆ. ಅದೇ ರೀತಿ ಎಂಎಲ್‍ಸಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಪ್ರಜಾಸತ್ತಾತ್ಮಕವಲ್ಲದ ಮಾರ್ಗಗಳನ್ನು ಉಪಯೋಗಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ಥಳೀಯ ಉತ್ಪನ್ನ ಮಾತ್ರ ಖರೀದಿಸಲು ಜನರನ್ನು ಪ್ರೇರೇಪಿಸಿ: ಸ್ವಾಮೀಜಿಗಳಿಗೆ ಮೋದಿ ಮನವಿ
ಉತ್ತರ ಪ್ರದೇಶದಲ್ಲಿ ಬಿಜೆಪಿ ಸತತ ಎರಡನೇ ಬಾರಿಗೆ ಸರ್ಕಾರವನ್ನು ರಚಿಸಿದ ಕೂಡಲೇ ಅಯೋಧ್ಯೆಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಯಿತು. ಈ ಘಟನೆಯಿಂದ ಬಾಲಕಿಯ ಚಿಕ್ಕಪ್ಪ ಸಾವನ್ನಪ್ಪಿದ್ದು, ಸಂತ್ರಸ್ತೆಯ ಕುಟುಂಬ ಇನ್ನೂ ನ್ಯಾಯದ ನಿರೀಕ್ಷೆಯಲ್ಲಿದೆ. ಆದರೆ ಅತ್ಯಾಚಾರ ನಡೆದ ಮಠವನ್ನು ಕೆಡವಲು ಯೋಗಿ ಆದಿತ್ಯನಾಥ್ ತಮ್ಮ ಬುಲ್ಡೋಜರ್‌ಗಳನ್ನು ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.