ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇ ತಡ, ರಾಜ್ಯದಲ್ಲಿ 50 ಕ್ಕೂ ಹೆಚ್ಚು ಅಪರಾಧಿಗಳು ಪೊಲೀಸರಿಗೆ ಶರಣಾಗಿದ್ದಾರೆ ಅಂತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಇಬ್ಬರು ಅಪರಾಧಿಗಳನ್ನು ಎನ್‍ಕೌಂಟರ್ ಮಾಡಿ ಹತ್ಯೆ ಮಾಡಲಾಗಿದೆ. ಹಲವು ಅಪರಾಧಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: 89 ಜನರಿಗೆ ಕೊರೊನಾ, 85 ಜನ ಡಿಸ್ಚಾರ್ಜ್ – 4 ಸಾವು
ತಲೆಮರೆಸಿಕೊಂಡಿದ್ದ ಅನೇಕ ಕ್ರಿಮಿನಲ್‍ಗಳು ನಾನು ಶರಣಾಗುತ್ತಿದ್ದೇನೆ. ದಯವಿಟ್ಟು ನನ್ನನ್ನು ಶೂಟ್ ಮಾಡಬೇಡಿ ಎಂಬ ಸಂದೇಶಗಳಿರುವ ಫಲಕಗಳನ್ನು ಕುತ್ತಿಗೆಗೆ ನೇತುಹಾಕಿಕೊಂಡು ಪೊಲೀಸ್ ಠಾಣೆಗೆ ಹಿಂತಿರುಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಕಳೆದ ವಾರ ರೈಲ್ವೆ ನಿಲ್ದಾಣದ ಬಳಿಯ ಶೌಚಾಲಯದಲ್ಲಿ ಮಹಿಳೆಯ ಮೇಲೆ ಆರೋಪಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿ ಪತ್ತೆ ಕಾರ್ಯ ಕಷ್ಟವಾಗಿತ್ತು. ಹೀಗಾಗಿ ಆರೋಪಿಯ ಮನೆ ಮುಂದೆ ಬುಲ್ಡೋಜರ್ ನಿಲ್ಲಿಸಲಾಗಿತ್ತು. 24 ಗಂಟೆಯ ಒಳಗಡೆ ಶರಣಾಗದೇ ಇದ್ದರೆ ಮನೆಯನ್ನು ಕೆಡವಲಾಗುತ್ತದೆ ಎಂದು ಸಂದೇಶವನ್ನು ಅಧಿಕಾರಿಗಳು ರವಾನೆ ಮಾಡಿದ್ದರು. ಈ ವಿಚಾರ ತಿಳಿದಿದ್ದೇ ತಡ ಆರೋಪಿ ಠಾಣೆಗೆ ಬಂದು ಶರಣಾಗಿದ್ದ.
ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಯೋಗಿ ಆದಿತ್ಯನಾಥ್ ಸರ್ಕಾರ ಅಕ್ರಮ ಕಟ್ಟಡಗಳೆಂದು ಬಹಳಷ್ಟು ಕಟ್ಟಡಗಳನ್ನು ಕೆಡವಿ ಹಾಕಿತ್ತು. ಯೋಗಿ ಈ ತೆರವು ಕ್ರಮಗಳನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕಿಸಿ ಬುಲ್ಡೋಜರ್ ಬಾಬಾ ಎಂದು ವ್ಯಂಗ್ಯವಾಡಿದ್ದರು. ಇದನ್ನೂ ಓದಿ: ವುಹಾನ್ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್: 2.6 ಕೋಟಿ ಜನ ಮನೆಯಲ್ಲೇ ಲಾಕ್
ಯೋಗಿ ಆದಿತ್ಯನಾಥ್ ಬುಲ್ಡೋಜರ್ ಅನ್ನು ಅಭಿವೃದ್ಧಿ ಹಾಗೂ ಶಕ್ತಿಯ ಸಂಕೇತ ಎಂದು ಬಿಂಬಿಸಿದ್ದರು. ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಅನಧಿಕೃತ, ಅಕ್ರಮ ಕಟ್ಟಡಗಳನ್ನು ಕೆಡವುವ ಮೂಲಕ ಭೂಮಾಫಿಯಾಗೆ ಬಿಸಿ ಮುಟ್ಟಿಸುವ ಹಾಗೂ ಎಕ್ಸ್‌ಪ್ರೆಸ್ ಹೈವೇಗಳನ್ನು ಕಟ್ಟುವ ಸಾಧನವಾಗಿ ಅದನ್ನು ಬಿಂಬಿಸಿತ್ತು.