ಭೋಪಾಲ್: ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು (Tribal) ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದ ಆರೋಪಿ ಪ್ರವೇಶ್ ಶುಕ್ಲಾ ಮನೆಯನ್ನ ಬುಲ್ಡೋಜರ್‌ನಿಂದ (Bulldozer) ಧ್ವಂಸಗೊಳಿಸಲಾಗಿದೆ.
ರಾಜ್ಯ ಸರ್ಕಾರದ ಆದೇಶದ ಮೇರೆಗೆ ಅಧಿಕಾರಿಗಳು ಆರೋಪಿ ಮನೆಯನ್ನ ಧ್ವಂಸಗೊಳಿಸಿದ್ದಾರೆ. ಆದ್ರೆ ಆರೋಪಿ ಕುಟುಂಬಸ್ಥರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹಳೆಯ ವೀಡಿಯೋ ಆಗಿದ್ದು, ಚುನಾವಣೆ ಹತ್ತಿರವಾಗಿರೋದ್ರಿಂದ ಇದನ್ನ ಮುನ್ನೆಲೆಗೆ ತರಲಾಗಿದೆ. ರಾಜಕೀಯ ಕಾರಣಗಳಿಗಾಗಿ ಹಳೆಯ ವೀಡಿಯೋ ಪ್ರಸಾರ ಮಾಡುತ್ತಿದ್ದಾರೆ ಎಂದು ಆರೋಪಿ ಸಹೋದರಿ ದೂರಿದ್ದಾರೆ. ಇದನ್ನೂ ಓದಿ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್
ಆರೋಪಿ ಪ್ರವೇಶ್ ಶುಕ್ಲಾ ತಂದೆ, ನನ್ನ ಮಗ ಈ ಕೃತ್ಯ ಎಸಗಲು ಸಾಧ್ಯವೇ ಇಲ್ಲ. ಆತನನ್ನ ಸಿಕ್ಕಿಹಾಕಿಸುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ನಮಗೆ ತುಂಬಾ ನೋವಾಗಿದೆ ಎಂದು ಅಳಲುತೋಡಿಕೊಂಡಿದ್ದಾರೆ. ಸದ್ಯ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಬಂಧಿತನಾಗಿರುವ ಪ್ರವೇಶ್ ಶುಕ್ಲಾನನ್ನ ರೇವಾ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ವಿಷಾನಿಲ ಸೋರಿಕೆ – 16 ಜನರ ದುರ್ಮರಣ
ಏನಿದು ಘಟನೆ?
ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿತ್ತು. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಗದ್ದಲ ಉಂಟಾಗಿತ್ತು. ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿತ್ತು.
ವೀಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆತನ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದರು. ಮಂಗಳವಾರ ತಡರಾತ್ರಿ ಆರೋಪಿ ಪ್ರವೇಶ್ ಶುಕ್ಲಾನನ್ನ ಬಂಧಿಸಲಾಗಿತ್ತು.
ಆತನ ವಿರುದ್ಧ ಬಹಾರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳು 294, 504, ಸೆಕ್ಷನ್ 3(1) (R)(s) SC/ST ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ತನಿಖೆಯ ಭಾಗವಾಗಿ ಆರೋಪಿಯ ಪತ್ನಿ ಹಾಗೂ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Web Stories