ಚಂಡೀಗಢ: ಗಡಿ ಭದ್ರತಾ ಪಡೆ (Border Security Force) ಯೋಧರ ಕ್ಯಾಂಟೀನ್‍ನಲ್ಲಿ ಗುಂಡಿನ ದಾಳಿಯಾಗಿದ್ದು, 5 ಮಂದಿ ಯೋಧರು ಸಾವನ್ನಪಿರುವ ಘಟನೆ ನಡೆದಿದೆ.
ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಅಟ್ಟಾರಿ-ವಾಘಾ ಗಡಿ ದಾಟುವಿಕೆಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಖಾಸಾ ಪ್ರದೇಶದ ಫೋರ್ಸ್ ಮೆಸ್‍ನಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮೊದಲು ಉಕ್ರೇನ್ ಸ್ವರ್ಗದಂತಿತ್ತು, ಈಗ ನರಕವಾಗಿದೆ – ಉಕ್ರೇನ್‍ನಲ್ಲಿ ಸಿಲುಕಿದ್ದ ಬೀದರ್ ಮೂಲದ ಯುವಕ
Advertisement
5 troops were injured today due to fratricide committed by Ct Satteppa SK at HQ 144 Bn Khasa, Amritsar. Ct Satteppa S K was also injured. Out of the 6 injured, 5 troops incl Ct Satteppa, have lost their lives, one critical. A court of inquiry has been ordered: BSF pic.twitter.com/d17FzAdFkl
— ANI (@ANI) March 6, 2022
Advertisement
ಬಿಎಸ್‍ಎಫ್ ಕಾನ್ಸ್‌ಟೇಬಲ್ ಮನಬಂದಂತೆ ಗುಂಡಿನ ದಾಳಿ ನಡೆಸಿದಾಗ ಐವರು ಯೋಧರ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ, ಕಾನ್ಸ್‌ಟೇಬಲ್ ಕೂಡಾ ಸಾವನ್ನಪ್ಪಿದ್ದಾನೆ. ಗಡಿ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
ಪಂಜಾಬ್‍ನ ಅಮೃತಸರದ ಫೋರ್ಸ್ ಕ್ಯಾಂಪ್‍ನಲ್ಲಿ ಇಂದು ಬಿಎಸ್‍ಎಫ್ ಕಾನ್ಸ್‌ಟೇಬಲ್ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಗಡಿ ಭದ್ರತಾ ಪಡೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.