ಮುಂಬೈ: ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಶ್ಲೀಲವಾಗಿ ಚಿತ್ರಿಸಿ ಅವರನ್ನು ಹರಾಜು ಹಾಕುತ್ತಿದ್ದ ಬುಲ್ಲಿ ಬಾಯ್ ಆ್ಯಪ್ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಮತ್ತು ಇತರ ಇಬ್ಬರು ಆರೋಪಿಗಳಿಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನೀರಜ್ ಬಿಷ್ಣೋಯ್, ಔಮ್ಕಾರೇಶ್ವರ್ ಠಾಕೂರ್ ಮತ್ತು ನೀರಜ್ ಸಿಂಗ್ ಅವರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ.ಬಿ.ಶರ್ಮಾ ಇಂದು ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಗಳಿಗೆ ತಲಾ 50 ಸಾವಿರ ಬಾಂಡ್‌ನೊಂದಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಇದನ್ನೂ ಓದಿ: ಮಹಿಳೆಯರ ಫೋಟೋ ಹರಾಜು ಹಾಕುತ್ತಿದ್ದ ಆನ್‌ಲೈನ್ ಆ್ಯಪ್ ನಿಷೇಧ
ಆರೋಪಿಗಳು ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ವಿದೇಶ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ. ಪ್ರತಿ ತಿಂಗಳಿಗೊಮ್ಮೆ ಪೊಲೀಸರ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
Govt. of India is working with police organisations in Delhi and Mumbai on this matter. https://t.co/EOLUb0FlQe
— Ashwini Vaishnaw (@AshwiniVaishnaw) January 2, 2022
ವಕೀಲ ಶಿವಂ ದೇಶಮುಖ್ ಅವರ ಮೂಲಕ ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ, ಬಿಷ್ಣೋಯ್ ಅವರನ್ನು ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ. ಹಾಗಾಗಿ ಸಮಾನತೆ ನೀಡುವಂತೆ ಕೋರಲಾಗಿತ್ತು. ಅರ್ಜಿಯನ್ನು ಪರಿಗಣಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಆ್ಯಪ್‍ನಲ್ಲಿ ಮಹಿಳೆಯರ ಮಾರಾಟ – ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ
ಏನಿದು ಬುಲ್ಲಿ ಬಾಯ್ ಪ್ರಕರಣ?
ಬುಲ್ಲಿ ಬಾಯ್ ಹೆಸರಿನಲ್ಲಿದ್ದ ಆ್ಯಪ್, ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ ಅವರನ್ನು ಅಶ್ಲೀಲವಾಗಿ ಚಿತ್ರಿಸಿ ಹರಾಜು ಹಾಕಲಾಗುತ್ತಿತ್ತು. ಅದಕ್ಕೆ ಈ ಆ್ಯಪ್ ವಿರುದ್ಧ ಎಲ್ಲ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಆ್ಯಪ್ ಅನ್ನು ನಿಷೇಧಿಸಿತ್ತು. ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ ಮುಂಬೈ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬೆಂಗಳೂರಿನ ಓರ್ವ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನೂ ವಶಕ್ಕೆ ಪಡೆಯಲಾಗಿತ್ತು.