ವಿಜಯಪುರ: 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ವಿಜಯಪುರಕ್ಕೆ (Vijayapura) ಬಂಪರ್ ಗಿಫ್ಟ್ ನೀಡಲಾಗಿದ್ದು, ಜಿಲ್ಲೆಯ ಬಹುನಿರೀಕ್ಷಿತ ವಿಮಾನ ನಿಲ್ದಾಣ ಈ ವರ್ಷದಿಂದ ಕಾರ್ಯಾರಂಭಿಸಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ಪಲ್ಟಿ – 18 ಮಂದಿಗೆ ಗಾಯ
ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಜಿಲ್ಲೆಯ ಜೀವನದಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತದ 3 ಅಡಿ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ತೀರ್ಪಿನ ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿ, ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಜಿಲ್ಲೆಯ ಬಹುನಿರೀಕ್ಷಿತ ವಿಮಾನ ನಿಲ್ದಾಣ ಈ ವರ್ಷದಿಂದ ಕಾರ್ಯಾರಂಭಿಸಲಿದೆ. ಜೊತೆಗೆ ವಿಜಯಪುರದ ತಿಡಗುಂದಿಯಲ್ಲಿ ಪ್ಲಗ್ ಮತ್ತು ಪ್ಲೇ ಸೌಲಭ್ಯವಿರುವ ಪ್ಲಾö್ಯಟ್‌ನಲ್ಲಿ ಕಾರ್ಖಾನೆ ಸ್ಥಾಪನೆಗೆ ಅಸ್ತು ಎನ್ನಲಾಗಿದೆ.ಇದನ್ನೂ ಓದಿ: ನಾನು ನಿಮ್ಮ ಹಾಗೆ ಆಗಬೇಕು ಎಂದ ವಿದ್ಯಾರ್ಥಿನಿಯನ್ನು ತಮ್ಮ ಕುರ್ಚಿಯಲ್ಲಿ ಕೂರಿಸಿದ ಉ.ಕನ್ನಡ ಜಿಲ್ಲಾಧಿಕಾರಿ