ಕರ್ನಾಟಕ ರತ್ನ (Karnataka Ratna Award) ಡಾ.ಪುನೀತ್ ರಾಜ್ ಕುಮಾರ್ (Puneeth Rajkumar) ಕನಸಿನ `ಗಂಧದಗುಡಿ’ ರಿಲೀಸ್ ಒಂದು ವಾರದಲ್ಲೇ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣ್ತಿದೆ. ನೂರಾರು ಚಿತ್ರಮಂದಿರಗಳಲ್ಲಿ (Cinema Theatre,) ಬಿಡುಗಡೆ ಆಗಿದ್ದ, ಡಾಕ್ಯುಮೆಂಟರಿ ಸಿನಿಮಾಗೆ ಅಪ್ಪು ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಬರ್ತಿದೆ. ವೀಕೆಂಡ್ ರಜೆಗಳೂ ಚಿತ್ರಕ್ಕೆ ಸಾಥ್ ನೀಡಿದ್ದು ಅಭಿಮಾನಿಗಳು ಚಿತ್ರ ಮಂದಿರದತ್ತ ಬರುತ್ತಿದ್ದಾರೆ.
Advertisement
ಈ ಸಿನಿಮಾಗೆ 2 ಕೋಟಿ ಖರ್ಚು ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಸಿನಿ ಪಂಡಿತರ ಲೆಕ್ಕಾಚಾರದಲ್ಲಿ ಈಗಾಗಲೇ ಗಂಧದಗುಡಿ (Gandhadagudi) 25 ಕೋಟಿಗೂ ಅಧಿಕ ಕಲೆಕ್ಷನ್ ಬಾಚಿಕೊಂಡಿದೆ. ಇದೀಗ ರಾಜ್ಯಾದ್ಯಂತ ಪ್ರತಿಯೊಬ್ಬರೂ ಸಿನಿಮಾ (Cinema) ವೀಕ್ಷಣೆ ಮಾಡಲಿ ಹಾಗೂ ಪರಿಸರ ಜಾಗೃತಿ ಅಳವಡಿಸಿಕೊಳ್ಳಲಿ ಅನ್ನೋ ಕಾರಣಕ್ಕೆ ಟಿಕೆಟ್ ದರದಲ್ಲಿ ಭಾರೀ ರಿಯಾಯಿತಿ ನೀಡಲಾಗಿದೆ. ಇದನ್ನೂ ಓದಿ: ‘ಗಂಧದ ಗುಡಿ’ ರಿಲೀಸ್ ಆಗಿ ಒಂದು ವಾರ: ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Advertisement
Advertisement
ಈ ಕುರಿತು ಪ್ರಕಟಣೆ ಹೊರಡಿಸಿರುವ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneet Rajkumar), ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು, ಅದರಲ್ಲೂ ಮಕ್ಕಳು ನೋಡಬೇಕು ಎಂಬುದಾಗಿದೆ. ಈ ಸಲುವಾಗಿ ನಾನು ಹಾಗೂ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಚಿತ್ರ `ಗಂಧದಗುಡಿ’ಯನ್ನು ನವೆಂಬರ್ 7 ರಿಂದ 10ರ ವರೆಗೆ ಸಿಂಗಲ್ ಸ್ಕ್ರೀನ್ ಥೀಯೇಟರ್ ಗಳಲ್ಲಿ 756 ರೂ.ಗಳಿಗೆ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ (Mulitiplex) 112 ರೂ.ಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿ ಯನ್ನು ತೋರಿಸೋಣ ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಚಿಲ್ಲರೆ, ಮಾನಗೆಟ್ಟವನೇ ಎಂದು ರೂಪೇಶ್ ರಾಜಣ್ಣಗೆ ಸಂಬರ್ಗಿ ಕ್ಲಾಸ್
Advertisement
ಗಂಧದಗುಡಿ ಸಿನಿಮಾವನ್ನು ಜಗತ್ತಿಗೆ ತೋರಿಸುವ ಹಂಬಲ ದಿ. ಪುನೀತ್ ಅವರಿಗಿತ್ತು. ಅವರ ಕನಸನ್ನು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈಡೇರಿಸುತ್ತಿದ್ದು, ಚಿತ್ರವನ್ನು ಎಲ್ಲರಿಗೂ ತೋರಿಸಲು ಹಲವು ಕಾರ್ಯಕ್ರಮಗಳನ್ನೂ ರೂಪಿಸುತ್ತಿದ್ದಾರೆ.