– ಶ್ರೀಕೃಷ್ಣ ಮಠಕ್ಕೆ ಬರುತ್ತಿದ್ದ ಭಕ್ತರ ಸಂಖ್ಯೆ ಇಳಿಮುಖ
ಉಡುಪಿ: ಜಿಲ್ಲೆಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೂ ಭಾರತ್ ಬಂದ್ ಎಫೆಕ್ಟ್ ತಟ್ಟಿದೆ. ಪ್ರತಿದಿನ ಮಧ್ಯಾಹ್ನ ತುಂಬಿ ತುಳುಕುವ ಕೃಷ್ಣಮಠದ ಭೋಜನ ಶಾಲೆಗಳು ಇಂದು ಖಾಲಿ ಖಾಲಿಯಾಗಿ ಕಾಣುತ್ತಿದೆ.
ಕಾರ್ಮಿಕರ ಮುಷ್ಕರದ ಹಿನ್ನೆಲೆಯಲ್ಲಿ ಇಂದು ಭಾರತ್ ಬಂದ್‍ಗೆ ಹಲವು ಸಂಘಟನೆಗಳು ಕರೆ ಕೊಟ್ಟಿದೆ. ಆದರಿಂದ ದೇಶಾದ್ಯಂತ ಬಹುತೇಕ ಕಾರ್ಮಿಕರು ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಲ್ಲದೆ ಸಾರಿಗೆ ಇಲಾಖೆಯಂತೂ ಕೆಲವೆಡೆ ಸಂಪೂರ್ಣ ಸ್ಥಗಿತಗೊಂಡಿದ್ದು, ರಾಜ್ಯದಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಸರಿಯಾದ ಸಮಯಕ್ಕೆ ಸಾರಿಗೆ ವ್ಯವಸ್ಥೆ ಸಿಗದೆ ರೋಗಿಗಳು, ವಿದ್ಯಾರ್ಥಿಗಳು ಹಾಗೂ ಜನರು ಪರದಾಡುವ ಪರಿಸ್ಥಿತಿ ಉಂಟಾಗಿದೆ.
Advertisement
Advertisement
ಈ ಬಂದ್ ಬಿಸಿ ಕೊಂಚ ಉಡುಪಿ ಮಠಕ್ಕೂ ತಟ್ಟಿದೆ. ಬಂದ್ ಇರುವ ಹಿನ್ನೆಲೆ ಮಠಕ್ಕೆ ಬರುವ ಭಕ್ತರ ಸಂಖ್ಯೆ ಇಳಿಮುಖವಾಗಿದೆ. ಅದರಲ್ಲೂ ಮಠದ ಭೋಜನ ಶಾಲೆಯಲ್ಲಿ ಇಂದು ಕೇವಲ ಮೂರು ಸಾವಿರ ಭಕ್ತರು ಮಾತ್ರ ಅನ್ನಪ್ರಸಾದ ಸ್ವೀಕಾರ ಮಾಡಿದ್ದಾರೆ. ಇಲ್ಲವಾದರೆ ಮಠದಲ್ಲಿ ಪ್ರತಿನಿತ್ಯ 8 ರಿಂದ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನದಾನ ನಡೆಯುತ್ತಿತು. ರಜೆ ಇದ್ದ ದಿನಗಳಲ್ಲಿ 15 ಸಾವಿರಕ್ಕೂ ಹಚ್ಚು ಜನರು ಅನ್ನಪ್ರಸಾದವನ್ನು ಸ್ವೀಕರಿಸುತ್ತಾರೆ. ಆದ್ರೆ ಇಂದು ಮಠಕ್ಕೆ ಹೊರ ಜಿಲ್ಲೆಯ ಪ್ರವಾಸಿಗರ ಬಸ್ಸುಗಳೂ ಬರಲಿಲ್ಲ. ಶಾಲಾ ಕಾಲೇಜು ವಿದ್ಯಾರ್ಥಿಗಳಂತೂ ಮಠದ ಕಡೆ ಮುಖ ಮಾಡಿಲ್ಲ.
Advertisement
Advertisement
ಇಂದು ಮತ್ತು ನಾಳೆ ಭಾರತ್ ಬಂದ್ ಇರುವುದರಿಂದ ಮುಂಜಾಗೃತೆ ಕ್ರಮವಾಗಿ ಕಡಿಮೆ ಅಡುಗೆ ತಯಾರಿ ಮಾಡಿದ್ದೇವೆ. ರಾತ್ರಿಯೂ ಕೂಡ ಭಕ್ತರು ಕಡಿಮೆ ಸಂಖ್ಯೆಯಲ್ಲಿ ಬರುವ ಸಾಧ್ಯತೆಯಿದೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv