LatestMain PostNational

ಇನ್‍ಸ್ಟಾಗ್ರಾಮ್‍ನಲ್ಲಿ ಚುನಾವಣಾ ಆಯೋಗದ ಕಾರ್‌ನೊಂದಿಗೆ ಐಎಎಸ್ ಅಧಿಕಾರಿ ಪೋಸ್ಟ್ – ಕರ್ತವ್ಯದಿಂದ ವಜಾ

ಗಾಂಧೀನಗರ: ಗುಜರಾತ್ ವಿಧಾನಸಭೆ (Gujarat Election) ಚುನಾವಣೆಗಾಗಿ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ (Abhishek Singh) ತಮ್ಮ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಫೋಟೋ ಪೋಸ್ಟ್ ಮಾಡಿದ್ದಕ್ಕಾಗಿ ಕೇಂದ್ರ ಚುನಾವಣಾ ಆಯೋಗ (Election Commission) ಅವರನ್ನು ಚುನಾವಣಾ ಕರ್ತವ್ಯದಿಂದ ತೆಗೆದುಹಾಕಿದೆ.

ಅಭಿಷೇಕ್ ಸಿಂಗ್‍ರನ್ನು ಅಹಮದಾಬಾದ್‍ನ ಬಾಪುನಗರ ಮತ್ತು ಅಸರ್ವಾ ಎರಡು ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಗಿತ್ತು. ಆ ಬಳಿಕ ಅಭಿಷೇಕ್ ಸಿಂಗ್ ಇನ್‍ಸ್ಟಾಗ್ರಾಮ್‍ನಲ್ಲಿ ಚುನಾವಣಾ ಆಯೋಗದಿಂದ ನೀಡಲಾಗಿದ್ದ ಅಧಿಕೃತ ವಾಹನದ ಪಕ್ಕದಲ್ಲಿ ನಿಂತು ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ವಾಹನದ ಮುಂಭಾಗದಲ್ಲಿ ʼಭಾರತೀಯ ಚುನಾವಣಾ ಆಯೋಗದ ವೀಕ್ಷಕʼ ಎಂದು ಬರೆಯಲಾಗಿತ್ತು. ಇದನ್ನು ಗಮನಿಸಿ ಚುನಾವಣಾ ಆಯೋಗ ಅವರನ್ನು ಚುನಾವಣಾ ಕರ್ತವ್ಯದಿಂದ ತೆಗೆದು ಹಾಕಿದ್ದು, ಪ್ರಚಾರದ ಗೀಳಿನಿಂದಾಗಿ ಅಧಿಕಾರ ಕಳೆದುಕೊಂಡಿದ್ದಾರೆ. ಅವರ ಬದಲಿಗೆ ಸಾಮಾನ್ಯ ವೀಕ್ಷಕರನ್ನು ನೇಮಿಸುವವರೆಗೆ ಈ ಎರಡು ಕ್ಷೇತ್ರಗಳ ಉಸ್ತುವಾರಿಯನ್ನು ಐಎಎಸ್ ಅಧಿಕಾರಿ ಕ್ರಿಶನ್ ಬಾಜ್‍ಪೇಯ್ ಅವರಿಗೆ ನೀಡಲಾಗಿದೆ. ಕ್ರಿಶನ್ ಅವರು ಇತರ ಹತ್ತಿರದ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಆಯ್ಕೆ ಸಮಿತಿ ವಜಾ – ಹೊಸ ಸಮಿತಿ ರಚನೆಗೆ ಅರ್ಜಿ ಆಹ್ವಾನ

 

View this post on Instagram

 

A post shared by Abhishek Singh (@abhishek_as_it_is)

ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಭಿಷೇಕ್ ಸಿಂಗ್ ಅವರನ್ನು ತೆಗೆದುಹಾಕಲಾಗಿದೆ ಮತ್ತು ಸಾಮಾನ್ಯ ವೀಕ್ಷಕರನ್ನು ನೇಮಿಸುವವರೆಗೆ ಕ್ರಿಶನ್ ಬಾಜ್‍ಪೇಯ್ ಅವರಿಗೆ ಉಸ್ತುವಾರಿ ನೀಡಲಾಗಿದೆ ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ಅಜಯ್ ಭಟ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಾಮನಿಗಿಂತ ರಾವಣ ಜ್ಞಾನಿ – ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ: ರಾಜನಾಥ್ ಸಿಂಗ್

Live Tv

Leave a Reply

Your email address will not be published. Required fields are marked *

Back to top button