ನವದೆಹಲಿ: ರಾಜಧಾನಿಯಲ್ಲಿ ದೀಪಾವಳಿಯಂದು (Diwali) ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂ. ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ.
ದೆಹಲಿಯಲ್ಲಿ (New Delhi) ಪಟಾಕಿಗಳ ಉತ್ಪಾದನೆ, ಶೇಖರಣೆ ಮತ್ತು ಮಾರಾಟ ಮಾಡಿದರೆ 5,000 ರೂ. ವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರ ಪ್ರತ್ಯೇಕ ದೇಶ – ಶಾಲಾ ಪ್ರಶ್ನೆ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದಕ್ಕೆ ವಿವಾದ
ದೆಹಲಿ ಸರ್ಕಾರವು ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಗೆ ಜನವರಿ 1 ರವರೆಗೆ ಸಂಪೂರ್ಣ ನಿಷೇಧ ವಿಧಿಸಿದೆ. ಇದು ಕಳೆದ ಎರಡು ವರ್ಷಗಳಿಂದ ಅನುಸರಿಸುತ್ತಿರುವ ಕ್ರಮವಾಗಿದೆ. ಅಕ್ಟೋಬರ್ 21 ರಂದು ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ನಿಷೇಧಾಜ್ಞೆ ಜಾರಿಗೊಳಿಸಲು 408 ತಂಡಗಳನ್ನು ರಚಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 210 ತಂಡಗಳನ್ನು ರಚಿಸಿದ್ದರೆ, ಕಂದಾಯ ಇಲಾಖೆಯಿಂದ 165 ತಂಡಗಳು ಮತ್ತು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯಿಂದ 33 ತಂಡ ರಚಿಸಲಾಗಿದೆ. ಇದನ್ನೂ ಓದಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಮೋದಿ ವಿಶ್