Connect with us

Latest

ಬಸ್ ಕಂದಕಕ್ಕೆ ಉರುಳಿ 33 ಮಂದಿ ಸಾವು, 13 ಜನರಿಗೆ ಗಾಯ

Published

on

ಶ್ರೀನಗರ್: ಬಸ್ ಕಂದಕಕ್ಕೆ ಉರುಳಿ 33ಕ್ಕೂ ಹೆಚ್ಚು ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿರುವ ಘಟನೆ ಜಮ್ಮು- ಕಾಶ್ಮೀರದ ಕಿಶ್ತಾವರ್ ಜಿಲ್ಲೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಸುಮಾರು 7.30ಕ್ಕೆ ಈ ಘಟನೆ ನಡೆದಿದೆ. 45 ಮಂದಿ ಪ್ರಯಾಣಿಕರಿದ್ದ ಬಸ್ ಕಿಶ್ತಾವರ್ ನಿಂದ ಕೇಶವನ್ ಕಡೆಗೆ ಸಂಚರಿಸುತಿತ್ತು. ಈ ವೇಳೆ ಶ್ರೀಗ್ವಾರಿ ಬಳಿ ಬಸ್ ಜಾರಿ ಆಳವಾದ ಕಂದಕಕ್ಕೆ ಉರುಳಿದೆ. ಪರಿಣಾಮ 33 ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆ.

ಬಸ್‍ನಲ್ಲಿ ಓವರ್ ಲೋಡ್ ಮಾಡಲಾಗಿತ್ತು. ಅಲ್ಲದೆ ಓವರ್ ಸ್ಪೀಡ್ ಹಾಗೂ ಸರಿಯಾದ ರಸ್ತೆ ಇಲ್ಲದ ಕಾರಣ ಈ ಅಪಘಾತವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅಲ್ಲದೆ ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳುತ್ತಿದ್ದಾರೆ.

ಪೊಲೀಸರು ಪರಿಹಾರ ಹಾಗೂ ರಕ್ಷಣಾ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಅಲ್ಲದೆ ಈ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಗ್ಗೆ ಗೃಹ ಸಚಿವ ಅಮಿತ್ ಶಾ, ಜಮ್ಮು- ಕಾಶ್ಮೀರದ ಹಿರಿಯ ರಾಜಕಾರಣಿಗಳಾದ ಮೆಹಬೂಬ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Click to comment

Leave a Reply

Your email address will not be published. Required fields are marked *