CrimeLatestLeading NewsMain PostNational

ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ – ದೀಪಾವಳಿ ಸಂಭ್ರಮಿಸಲು ಮನೆಗೆ ಹೋಗ್ತಿದ್ದ 15 ಕಾರ್ಮಿಕರು ಸಾವು

ಲಕ್ನೋ/ಭೋಪಾಲ್: ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ (Bus Accident) ಹೊಡೆದ ಪರಿಣಾಮ ದೀಪಾವಳಿ (Diwali) ಸಂಭ್ರಮಿಸಲು ಮನೆಗೆ ತೆರಳುತ್ತಿದ್ದ ಉತ್ತರಪ್ರದೇಶದ (UttarPradesh) 15 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ (Madhya Pradesh) ರೇವಾ ಹೆದ್ದಾರಿಯಲ್ಲಿ ನಡೆದಿದೆ.

ಸುಮಾರು 100 ಮಂದಿ ಪ್ರಯಾಣಿಕರಿದ್ದ ಬಸ್ ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ತೆರಳುತ್ತಿದ್ದಾಗ ತಡರಾತ್ರಿ ರೇವಾದ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಗಂಭೀರವಾಗಿ ಗಾಯಗೊಂಡ 40 ಮಂದಿಯನ್ನು ರೇವಾದ ಸಂಜಯ್ ಗಾಂಧಿ ಮೆಮೊರಿಯಲ್‌ ಆಸ್ಪತ್ರೆಗೆ (Sanjay Gandhi Memorial Hospital) ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಆಜಾದ್ ನಗರದಲ್ಲಿ ಕಾರು ಜಖಂ – ಹರ್ಷ ಸಹೋದರಿ ಅಶ್ವಿನಿ ವಿರುದ್ಧ FIR

ಈ ಅಪಘಾತಕ್ಕೂ ಮುನ್ನ ಇದೇ ದಾರಿಯಲ್ಲಿ ಮತ್ತೊಂದು ಟ್ರಕ್ ಅಪಘಾತ ಸಂಭವಿಸಿತ್ತು. ಹಾಗಾಗಿ ಟ್ರಕ್ ಹೆದ್ದಾರಿಯಲ್ಲೇ ಸಿಲುಕಿತ್ತು. ಈ ವೇಳೆ ಬಸ್ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ರೇವಾ ಎಸ್ಪಿ ನವನೀತ್ ಭಾಸಿನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಕಾರ್ಗಿಲ್ ಯುದ್ಧಭೂಮಿಯಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ

ಉತ್ತರ ಪ್ರದೇಶ ಕಾರ್ಮಿಕರು (Labourers) ಮಧ್ಯಪ್ರದೇಶದ ಕಟ್ನಿಯಿಂದ ಬಸ್ ಹತ್ತಿದ್ದರು. ಹೈದರಾಬಾದ್‌ನಿಂದ ಕಟ್ನಿಗೆ ಪ್ರತ್ಯೇಕ ಬಸ್‌ನಲ್ಲಿ ಬಂದಿದ್ದರು. ದೀಪಾವಳಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಅವರ ಕುಟುಂಬ ಸದಸ್ಯರಿಗೆ ಮೃತದೇಹಗಳನ್ನು ರವಾನಿಸಲು ರೇವಾ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಪಿಎಂ ಮೋದಿ ಮೃತರ ಕುಟುಂಬಕ್ಕೆ ತಲಾ 50 ಸಾವಿರ ಪರಿಹಾರಧನ ಘೋಷಿಸಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button