ರಾಯಚೂರು: ತಾಲೂಕಿನ ಯರಗೇರಾ ಗ್ರಾಮದಲ್ಲಿ ತೆಲಂಗಾಣ ಸಾರಿಗೆ ಬಸ್ ಹರಿದು ಬಾಲಕಿ ಸಾವನ್ನಪ್ಪಿದ್ದ ಹಿನ್ನೆಲೆ ಗ್ರಾಮಸ್ಥರು ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಿದರು. ಇದರಿಂದ ರಾಯಚೂರು ಮಂತ್ರಾಲಯ ರಸ್ತೆ ಮಾರ್ಗ ಸಂಪೂರ್ಣ ಬಂದ್ ಆಗಿತ್ತು.
ಜನವರಿ 31 ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಬಾಲಕಿ ಅಂಕಿತಾ (5) ಸಾವನ್ನಪ್ಪಿದ್ದಳು. ಆದರೆ ಇದುವರೆಗೂ ತೆಲಂಗಾಣ ಸರ್ಕಾರದಿಂದಾಗಲಿ, ರಾಜ್ಯ ಸರ್ಕಾರದಿಂದಾಗಲಿ ಯಾವುದೇ ಅಧಿಕಾರಿಗಳು ಕನಿಷ್ಟ ಸಾಂತ್ವನ ಹೇಳಲು ಬಂದಿಲ್ಲ. ಮೃತಳ ಕುಟುಂಬಕ್ಕೆ ಪರಿಹಾರವೂ ನೀಡಿಲ್ಲ. ಹೀಗಾಗಿ ಆಕ್ರೋಶಗೊಂಡಿರುವ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು.
Advertisement
Advertisement
ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ. ಗ್ರಾಮಸ್ಥರ ಹೋರಾಟದಿಂದ ಮಂತ್ರಾಲಯ ರಸ್ತೆಯಲ್ಲಿ ಸುಮಾರು ಒಂದು ಗಂಟೆಕಾಲ ಟ್ರಾಫಿಕ್ ಜಾಮ್ ಆಗಿತ್ತು. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ರಾಯಚೂರು ಗ್ರಾಮಾಂತರ ಜೆಡಿಎಸ್ ಘಟಕ ಸೇರಿ ವಿವಿಧ ಸಂಘಟನೆಗಳು ಹೋರಾಟಕ್ಕೆ ಬೆಂಬಲ ನೀಡಿದ್ದವು. ಇದನ್ನೂ ಓದಿ: ತಂಗಿ ಆರೋಗ್ಯ ಸರಿಯಿಲ್ಲವೆಂದು ಕ್ಯಾಬ್ ದರೋಡೆ ಮಾಡಿದ ಸಹೋದರರು..!