ಬೆಳಗಾವಿ: ಬ್ರೇಕ್ ಫೇಲ್‍ನಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ತಪ್ಪಿಸಿ ಸಮಯ ಪ್ರಜ್ಞೆ ಮೆರೆದ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದಲ್ಲಿ ನಡೆದಿದೆ.
ಗುರುವಾರ ಬೆಳಗಾವಿ ಘಟಕದ ಧಾರವಾಡದಿಂದ ಬೆಳಗಾವಿಗೆ ಹೊರಟಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅನಾಹುತದಿಂದ ಪಾರಾಗಿದೆ. ಕಿತ್ತೂರು ಬಸ್ ನಿಲ್ದಾಣಕ್ಕೆ ಹೊರಟಿದ್ದಾಗ ಬ್ರೇಕ್ ಫೇಲ್ ಆಗಿರುವುದನ್ನು ತಿಳಿದ ಚಾಲಕ, ಬಸ್ಸನ್ನು ನಿಧಾನವಾಗಿ ಚಾಲನೆ ಮಾಡುತ್ತ ರಸ್ತೆ ಪಕ್ಕದಲ್ಲಿದ್ದ ದಿಬ್ಬಕ್ಕೆ ತಾಕಿಸುತ್ತ ವರ್ಷಿಣಿ ಬಾರ್ ಕಂಪೌಂಡ್‍ಗೆ ಡಿಕ್ಕಿ ಹೊಡೆಸಿದ್ದಾರೆ.
Advertisement
Advertisement
ಅದೃಷ್ಟವಶಾತ್ ಕೇವಲ ನಾಲ್ಕು ಜನ ಪ್ರಯಾಣಿಕರಿಗೆ ಮಾತ್ರ ಸಣ್ಣ ಪುಟ್ಟ ಗಾಯಗಳಾಗಿದ್ದು, ಬಸ್ಸಿನಲ್ಲಿದ್ದ ನಾಲ್ವತ್ತಕ್ಕೂ ಅಧಿಕ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯು ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.