ಬಸ್, ಕ್ಯಾಂಟರ್ ನಡುವೆ ಡಿಕ್ಕಿ – ಹಲವರಿಗೆ ಗಾಯ

Public TV
1 Min Read
chikkaballapur 1 2

ಚಿಕ್ಕಬಳ್ಳಾಪುರ: ಕೆಎಸ್‍ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಾರ್ಗದ ಕಣಿವೆ ಪ್ರದೇಶದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ತೆರಳುತ್ತಿದ್ದ ಪುತ್ತೂರು ಘಟಕದ ಬಸ್‍ಗೆ ಗೌರಿಬಿದನೂರು ಕಡೆಯಿಂದ ಚಿಕ್ಕಬಳ್ಳಾಪುರದ ಕಡೆಗೆ ಕಬ್ಬಿಣದ ರಾಡ್‍ಗಳನ್ನು ಹೊತ್ತು ಬರುತ್ತಿದ್ದ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದೆ.

chikkaballapur 5

ಕಣಿವೆ ಪ್ರದೇಶದಲ್ಲಿ ಸೇತುವೆ ಬಳಿ ಕವಲು ದಾರಿಯಿದ್ದು, ಎಡ ಬದಿಯಲ್ಲಿ ಬರಬೇಕಿದ್ದ ಕ್ಯಾಂಟರ್ ಚಾಲಕ ಬಲಬದಿಯಲ್ಲಿ ಬಂದಿದ್ದು, ಎದರುಗಡೆ ಬರುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದಿದ್ದಾನೆ. ಇದನ್ನೂ ಓದಿ:  ಪತಿ ಬಿಟ್ಟು ಪ್ರಿಯಕರನ ಜೊತೆ ಹೋಗಿದ್ದ ಮಹಿಳೆ ಅಸಹಜ ಸಾವು!

chikkaballapur 2 2

ಪರಿಣಾಮ ಎರಡು ವಾಹನಗಳ ಮುಂಭಾಗ ಜಖಂಗೊಂಡಿದ್ದು, ಕ್ಯಾಂಟರ್‌ನಲ್ಲಿದ್ದವರು ಹಾಗೂ ಬಸ್ ಚಾಲಕ, ನಿರ್ವಾಹಕ ಸೇರಿ 7-8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!

ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *