ಬಾಗಲಕೋಟೆ: ಕಿಯಾ ಕಾರು (Car) ಚಾಲಕನ ನಿರ್ಲಕ್ಷ್ಯದಿಂದ ಬಸ್ಸಿಗೆ (Bus) ಕಾರು ಗುದ್ದಿ ಇಬ್ಬರು ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ಧನ್ನೂರು ಕ್ರಾಸ್ ಬಳಿ ನಡೆದಿದೆ.
ಬಾಗಲಕೋಟೆ (Bagalkot) ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಹಾಜಿಸಾಬ್ ಬಾಗವಾನ್ (50), ಪರಶುರಾಮ ಕಟ್ಟಿ (45) ಮೃತರೆಂದು ಗುರುತಿಸಲಾಗಿದ್ದು, ಮೃತರೆಲ್ಲರೂ ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ಮೂಲದವರಾಗಿದ್ದರು.
ಹುನಗುಂದನಿಂದ ಮುದ್ದೇಬಿಹಾಳ ವೇಗದಿಂದ ಬಂದ ಕಿಯಾ ಕಾರು, ಫೋರ್ಡ್ ಎಂಡವರ್ ಕಾರ್‌ಗೆ ಗುದ್ದಿದೆ. ನಂತರ ಮುದ್ದೇಬಿಹಾಳ ಕಡೆಗೆ ಹೊರಟಿದ್ದ ಬಸ್‌ಗೆ ಗುದ್ದಿದೆ. ಕಾರ್ ಗುದ್ದಿದ ಪರಿಣಾಮ ಕಿಯಾ ಕಾರ್ ನಲ್ಲಿ ಮುಂದೆ ಕುಳಿತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದೆಹಲಿ ಸಚಿವ ರಾಜೀನಾಮೆ
ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ. ಕಿಯಾ ಕಾರಿನಲ್ಲಿದ್ದ ರಾಜು ಚವ್ಹಾಣ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುನಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ಟಿಪ್ಪು ಹೆಸರನ್ನು ಯಾವುದಕ್ಕೂ ಬಳಕೆ ಮಾಡುವುದಿಲ್ಲ: ಎನ್.ರವಿಕುಮಾರ್