ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಬಸ್ಸಿನಲ್ಲಿ ಬೆಂಕಿ ಕಾಣಿಸಿದ ಘಟನೆ ಇಂದು ರಾತ್ರಿ ನಡೆದಿದೆ.
ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಮತ್ತು 17 ಅಪರಾಧಿಗಳನ್ನು ಬಿಎಂಟಿಸಿ ಬಸ್ಸಿನಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಬರುತ್ತಿದ್ದರು. ಇದನ್ನೂ ಓದಿ: ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು?
ಪರಪ್ಪನ ಅಗ್ರಹಾರ ಸಮೀಪ ಬಸ್ಸಿನ ಕೆಳಗಡೆ ಬೆಂಕಿ ಕಾಣಿಸಿದೆ. ಬೆಂಕಿ ಕಾಣಿಸಿದ ತಕ್ಷಣ ಪೊಲೀಸರು ಬೇರೆ ವಾಹನದಲ್ಲಿ ಅಪರಾಧಿಗಳನ್ನು ಶಿಫ್ಟ್ ಮಾಡಿದರು.
ಆಯಿಲ್ ಸೋರಿಕೆಯಾಗಿ ಬಸ್ಸಿನ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ. ಚಾಲಕ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ನಂತರ ಸ್ಥಳೀಯರು ಬೆಂಕಿ ಆರಿಸಿದ್ದಾರೆ.

