ಉತ್ತರಾಖಂಡ: ಚಾಲಕನ ನಿಯಂತ್ರಣ ತಪ್ಪಿ ಮದುವೆ ಬಸ್ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು 30 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರಾಖಂಡದ (Uttarakhand) ಪೌರಿ (Pauri) ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಸುಮಾರು 8 ಗಂಟೆ ಘಟನೆ ನಡೆದಿದ್ದು, ಘಟನೆ ನಡೆದಾಗ ಬಸ್ಸಿನಲ್ಲಿ 50-55 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಹರಿದ್ವಾರ (Haridwar) ಜಿಲ್ಲೆಯ ಲಾಲ್ಧಾಂಗ್‌ನಿಂದ ಪೌರಿಯ ಬಿರೋನ್‌ಖಾಲ್‌ಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಧುವಿನ ಮನೆಯಿಂದ ಎರಡು ಕಿ.ಮೀ. ದೂರದಲ್ಲಿ ಅಪಘಾತ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಇಂಡಿಗೋ ಏರ್‌ಲೈನ್ಸ್‌ನಲ್ಲಿ ಸರ್ವರ್ ಸಮಸ್ಯೆ; ಚೆಕ್-ಇನ್, ಫ್ಲೈಟ್ ಕಾರ್ಯಾಚರಣೆಯಲ್ಲಿ ತೊಂದರೆ
Advertisement
Advertisement
ವಿಚಾರ ತಿಳಿದು ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯುತ್ತಿರುವ ಅಧಿಕಾರಿಗಳು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಂಭವವಿದೆ ಎಂದು ಹೇಳಿದ್ದಾರೆ. ಸ್ಥಳೀಯ ಶಾಸಕಿ ರಿತು ಖಂಡೂರಿ ಸ್ಥಳಕ್ಕೆ ಆಗಮಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದರು. ಇದನ್ನೂ ಓದಿ: ಮಂಜಿನ ನಗರಿ ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ
Advertisement
Advertisement
ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಅಪಘಾತದ ಹಿನ್ನೆಲೆಯಲ್ಲಿ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಧಾರವಾಡ| ಖಾಸಗಿ ಬಸ್‌ನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 98 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ