ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Kempegowda International Airport) ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ (Bus) ಪಲ್ಟಿಯಾಗಿ 15 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಏರ್‌ಪೋರ್ಟ್‌ನ ಬೇಗೂರು ಜಂಕ್ಷನ್ ಬಳಿ ನಡೆದಿದೆ.
ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದಿದೆ. ಇದರಿಂದ ಬಸ್‌ನ ಕೆಳಗಡೆ ಕಾರ್ಮಿಕರು ಸಿಲುಕಿ ನರಳಾಡಿದ್ದಾರೆ. ಕ್ರೇನ್ ಮೂಲಕ ಬಸ್ ಮೇಲೆತ್ತಿ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಯಲ್ಲೋ ಅಲರ್ಟ್ – ಮುಂದಿನ 3 ಗಂಟೆ ಭಾರೀ ಮಳೆ
ಕಾರ್ಮಿಕರನ್ನು ಬಸ್ ಮೂಲಕ ಊಟಕ್ಕೆಂದು ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಲಂಚ ಪಡೆಯುತ್ತಿದ್ದಾಗ ಲೋಕಾ ರೇಡ್ – ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಓ