ಬೆಂಗಳೂರು: ಪೆಟ್ರೋಲ್ ಬಂಕ್‍ನಲ್ಲಿ ಡಿಸೇಲ್ ಹಾಕಿಸುವಾಗಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಡಿವಾಳ ಪೊಲೀಸ್ ಠಾಣೆಯ ಪಕ್ಕದಲ್ಲಿ ಇರುವ ಭಾರತ್ ಪೆಟ್ರೋಲ್ ಬಂಕ್‍ನಲ್ಲಿ ಈ ಘಟನೆ ನಡೆದಿದೆ. ರಾತ್ರಿ ಸುಮಾರು 10:30ಕ್ಕೆ ವೇಳೆಗೆ ಬೆಂಗಳೂರಿನಿಂದ ಕೊಯಮತ್ತೂರಿಗೆ ಸಂಚಾರ ಮಾಡ್ತಿದ್ದ ಎಂಎಸ್‍ಎಸ್ ಟ್ರಾವೆಲ್ಸ್ ಬಸ್ ಡೀಸೆಲ್ ಹಾಕಿಸುವುದಕ್ಕೆ ಪೆಟ್ರೋಲ್ ಬಂಕ್‍ಗೆ ಹೋಗಿದೆ. ಡಿಸೇಲ್ ಹಾಕಿಸಿದ ಬಳಿಕ ಬಸ್ ಚಲಾಯಿಸಲು ಚಾಲಕ ಮುಂದಾದಾಗ ಶಾರ್ಟ್ ಸರ್ಕ್ಯೂಟ್‍ನಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
Advertisement
Advertisement
ಈ ಬಸ್ಸಿನಲ್ಲಿ 34 ಜನ ಪ್ರಯಾಣಿಕರಿದ್ದರು. ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಚಾಲಕ ಮತ್ತು ಕಂಡಕ್ಟರ್ ಸೇರಿ 34 ಜನ ಪ್ರಯಾಣಿಕರು ಚೆಲ್ಲಾಪಿಲ್ಲಿ ಆಗಿದ್ದಾರೆ. ಬಳಿಕ ಬೆಂಕಿ ಕಾಣಿಸಿಕೊಂಡ ನಂತರ ನಾಲ್ಕು ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿ ಪೆಟ್ರೋಲ್ ಬಂಕ್‍ನಲ್ಲಿ ನಡೆಯಬೇಕಾಗಿದ್ದ ದೊಡ್ಡ ಅಗ್ನಿ ಅವಘಡವನ್ನ ತಡೆದಿದ್ದಾರೆ.
Advertisement
ಸ್ಥಳದಲ್ಲೆ ಬಸ್ ಸುಟ್ಟು ಕರಕಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಮಡಿವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಮುಂದಾಗಿದ್ದಾರೆ.